ಕೋಲಾರದಲ್ಲಿ ಪಾತಾಳ ಕಂಡ ಟೊಮ್ಯಾಟೋ ಬೆಲೆ: ರಸ್ತೆ ಬದಿ ತಂದು ಬೆಳೆ ಸುರಿದ ರೈತರು

Edited By:

Updated on: Jul 09, 2026 | 7:06 PM

ಕೋಲಾರ ಜಿಲ್ಲೆಯಲ್ಲಿ ಟೊಮ್ಯಾಟೊ ಬೆಲೆ ದಿಢೀರ್ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಒಂದು ತಿಂಗಳ ಹಿಂದೆ 700-800 ರೂ. ಇದ್ದ 15 ಕೆಜಿ ಬಾಕ್ಸ್ ಟೊಮ್ಯಾಟೊ ಬೆಲೆ ಈಗ 50-200 ರೂ.ಗೆ ಕುಸಿದಿದೆ. ಉತ್ಪಾದನಾ ವೆಚ್ಚವೂ ಸಿಗದ ಕಾರಣ ರೈತರು ತಮ್ಮ ಬೆಳೆಗಳನ್ನು ರಸ್ತೆ ಬದಿ ಮತ್ತು ಕೆರೆಗಳಲ್ಲಿ ಸುರಿಯುತ್ತಿದ್ದಾರೆ. ರೈತರು ಸರ್ಕಾರದಿಂದ ಬೆಂಬಲ ಬೆಲೆಗೆ ಮನವಿ ಮಾಡಿದ್ದಾರೆ. ಬೇಡಿಕೆಗಿಂತ ಹೆಚ್ಚು ಉತ್ಪಾದನೆಯೇ ಬೆಲೆ ಇಳಿಕೆಗೆ ಪ್ರಮುಖ ಕಾರಣ ಎನ್ನಲಾಗಿದೆ.

ಕೋಲಾರ, ಜುಲೈ 09: ಜಿಲ್ಲೆಯಲ್ಲಿ ಟೊಮ್ಯಾಟೋ ಬೆಲೆ ದಿಢೀರ್ ಕುಸಿತ ಕಂಡಿದ್ದು, ರೈತರು ಕಂಗಾಲಾಗಿದ್ದಾರೆ. ತಾವು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗದೆ, ಅವುಗಳನ್ನು ರಸ್ತೆ ಬದಿ ಮತ್ತು ಕೆರೆಗಳಲ್ಲಿ ಸುರಿಯುವಂತಹ ದಯನೀಯ ಪರಿಸ್ಥಿತಿ ನಿರ್ಮಾಣವಾಗಿದೆ. ಕಳೆದ ತಿಂಗಳು ಒಂದು 15 ಕೆ.ಜಿ. ಬಾಕ್ಸ್ ಟೊಮ್ಯಾಟೋ 600 ರಿಂದ 700 ರೂಪಾಯಿ ವರೆಗೆ ಮಾರಾಟವಾಗಿ ಸದ್ದು ಮಾಡಿತ್ತು. ಆದರೆ ಜುಲೈ ಆರಂಭದಿಂದ ಬೆಲೆ ತೀವ್ರ ಕುಸಿತ ಕಂಡಿದೆ. ಪ್ರಸ್ತುತ, ಕೋಲಾರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ. ಬಾಕ್ಸ್ ಟೊಮ್ಯಾಟೋ 50 ರಿಂದ 200 ರೂಪಾಯಿಗೆ ಮಾರಾಟವಾಗುತ್ತಿದೆ. ಬೇಡಿಕೆಗಿಂತ ಹೆಚ್ಚಾಗಿ ಟೊಮ್ಯಾಟೋ ಉತ್ಪಾದನೆ ಆಗಿರುವುದು ಬೆಲೆ ಕುಸಿತಕ್ಕೆ ಪ್ರಮುಖ ಕಾರಣ ಎನ್ನಲಾಗಿದೆ. ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಸಲಕರಣೆಗಳ ಬೆಲೆ ಏರಿಕೆಯಿಂದ ಉತ್ಪಾದನಾ ವೆಚ್ಚ ಹೆಚ್ಚಾಗಿದೆ. ರೈತರಿಗೆ ಒಂದು 15 ಕೆ.ಜಿ. ಬಾಕ್ಸ್ ಟೊಮ್ಯಾಟೋಗೆ ಕನಿಷ್ಠ 250 ರಿಂದ 300 ರೂಪಾಯಿ ದೊರೆತರೆ ಮಾತ್ರ ಲಾಭ ಸಿಗುತ್ತದೆ. ಈಗ ಸಾಗಾಟ ವೆಚ್ಚವೂ ಸಿಗದ ಕಾರಣ, ರೈತರು ಬೆಳೆಯನ್ನು ರಸ್ತೆ ಬದಿ ಸುರಿದು ಹೋಗುತ್ತಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Loading...
Unable to load recommendations.
Follow Us
ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More