Tomato price down: ಮಾರ್ಕೆಟ್​ನಲ್ಲಿ ಟೊಮ್ಯೊಟೋ ಬೆಲೆ ತೀವ್ರ ಕುಸಿತ! ರೈತರು ಕಂಗಾಲು

Edited By:

Updated on: Mar 07, 2026 | 10:07 AM

ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಚಿಕ್ಕಬಳ್ಳಾಪುರ, ಮಾರ್ಚ್​ 07: ಕೋಲಾರ–ಚಿಕ್ಕಬಳ್ಳಾಪುರ ಅವಳಿ ಜಿಲ್ಲೆಗಳು ಅತ್ಯುತ್ತಮ ಗುಣಮಟ್ಟದ ಟೊಮ್ಯಾಟೊ ಬೆಳೆಗೆ ಖ್ಯಾತಿಯಾಗಿದ್ದರೂ, ಇದೀಗ ಕೇಂಪು ಸುಂದರಿ ಟೊಮ್ಯಾಟೊ ಬೆಲೆ ತೀವ್ರ ಕುಸಿತ ಕಂಡಿದೆ. ಚಿಕ್ಕಬಳ್ಳಾಪುರ ಎಪಿಎಂಸಿ ಮಾರುಕಟ್ಟೆಯಲ್ಲಿ 15 ಕೆ.ಜಿ ಟೊಮ್ಯಾಟೊ ಬಾಕ್ಸ್ ಕೇವಲ 110 ರೂಪಾಯಿಗೆ ಮಾರಾಟವಾಗುತ್ತಿದ್ದು ರೈತರು ಕಂಗಾಲಾಗಿದ್ದಾರೆ. ಅಂತರ್ ರಾಜ್ಯಗಳಲ್ಲಿ ಬೇಡಿಕೆ ಕಡಿಮೆಯಾದ ಹಿನ್ನೆಲೆ ಬೆಲೆ ಇಳಿಕೆ ಕಂಡಿದ್ದು, ಮತ್ತೊಂದೆಡೆ ಚಿಲ್ಲರೆ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು 5 ಕೆ.ಜಿ ಟೊಮ್ಯಾಟೊವನ್ನು 100 ರೂಪಾಯಿಗೆ ಮಾರಾಟ ಮಾಡುತ್ತಿದ್ದಾರೆ. ಗ್ರಾಹಕರಿಗೆ ಸಿಹಿಯಾಗಿರುವ ಬೆಲೆ ಕುಸಿತ ರೈತರಿಗೆ ಮಾತ್ರ ಕಹಿಯಾಗಿದೆ. ರೈತರು ಟೊಮ್ಯಾಟೊಗೂ ಬೆಂಬಲ ಬೆಲೆ ನೀಡುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

Published on: Mar 07, 2026 10:04 AM
Loading...
Unable to load recommendations.
Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More