Tomato theft: ಟೊಮೆಟೊ ಬೆಲೆ ಗಗನಕ್ಕೆ.. ತೋಟಕ್ಕೆ ನುಗ್ಗಿ ನೂರಾರು ಕೆಜಿ ಟೊಮೆಟೊ ಕಳ್ಳತನ

|

Updated on: Jul 05, 2023 | 4:24 PM

ಗ್ರಾಮದ ಧರಣಿ ಎಂಬುವವರು ತಮ್ಮ ಜಮೀನಿನಲ್ಲಿ ಟೊಮೇಟೊ ಬೆಳೆದಿದ್ದರು. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇರುವುದುರಿಂದ ಒಳ್ಳೆಯ ಲಾಭ ಬರುತ್ತೆ ಎಂಬ ಆಸೆಯಲ್ಲಿದ್ದರು. ಆದ್ರೆ ಕಳೆದ ರಾತ್ರಿ ಹೊಲಕ್ಕೆ ನುಗ್ಗಿರುವ ಕೆಲ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮೌಲ್ಯದ ಟೊಮೇಟೊ ಕಳ್ಳತನ ಮಾಡಿದ್ದಾರೆ.

ಹಾಸನ: ರಾಜ್ಯದಲ್ಲಿ ಕೆಂಪು ಸುಂದರಿ ಟೊಮೇಟೊ ಬೆಲೆ ಗಗನಕ್ಕೇರಿದೆ(Tomato Rate Increased). ಯಾವ ಜಿಲ್ಲೆಗೆ ಹೋದರೂ 100 ರೂಪಾಯಿಗಿಂತ ಕಡಿಮೆ ಇಲ್ಲ. ಹೀಗಾಗಿ ಖದೀಮರು ಟೊಮೇಟೊ ಕಳ್ಳತನಕ್ಕೆ ಮುಂದಾಗಿದ್ದಾರೆ. ಹಾಸನ ಜಿಲ್ಲೆ ಬೇಲೂರು ತಾಲೂಕಿನ ಗೋಣಿ ಸೋಮನಹಳ್ಳಿ ಗ್ರಾಮದಲ್ಲಿ ಲಕ್ಷಾಂತರ ರೂಪಾಯಿ ಮೌಲ್ಯದ ಟೊಮೇಟೊ ಕಳ್ಳತನವಾಗಿದೆ(Tomato Theft). ಐವತ್ತರಿಂದ ಅರವತ್ತು ಬ್ಯಾಗ್‌ನಷ್ಟು ಟೊಮೇಟೊವನ್ನು ಖದೀಮರು ಕದ್ದು ಪರಾರಿಯಾಗಿದ್ದಾರೆ.

ಗ್ರಾಮದ ಧರಣಿ ಎಂಬುವವರು ತಮ್ಮ ಜಮೀನಿನಲ್ಲಿ ಟೊಮೇಟೊ ಬೆಳೆದಿದ್ದರು. ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಇರುವುದುರಿಂದ ಒಳ್ಳೆಯ ಲಾಭ ಬರುತ್ತೆ ಎಂಬ ಆಸೆಯಲ್ಲಿದ್ದರು. ಆದ್ರೆ ಕಳೆದ ರಾತ್ರಿ ಹೊಲಕ್ಕೆ ನುಗ್ಗಿರುವ ಕೆಲ ಕಳ್ಳರು ಸುಮಾರು ಒಂದೂವರೆ ಲಕ್ಷಕ್ಕೂ ಹೆಚ್ಚು ಮೌಲ್ಯದ ಟೊಮೇಟೊ ಕಳ್ಳತನ ಮಾಡಿದ್ದಾರೆ. ಇಂದು ಬೆಳಿಗ್ಗೆ ಧರಣಿ ಅವರು ತಮ್ಮ ಜಮೀನಿನ ಬಳಿ ಹೋದಾಗ ಟೊಮೇಟೊ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ. ಈ ಸಂಬಂಧ ಹಳೇಬೀಡು ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಲಕ್ಷಾಂತರ ಮೌಲ್ಯದ ಟೊಮೇಟೊ ಕಳೆದುಕೊಂಡು ರೈತ ಧರಣಿ ಕಂಗಾಲಾಗಿದ್ದಾರೆ.

ಹಾಸನಕ್ಕೆ ಸಂಬಂಧಿಸಿದ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ