ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್
ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ 6ನೇ ಗ್ಯಾರಂಟಿ, ಭೂಮಿ ಗ್ಯಾರಂಟಿ ಕುರಿತು ಮಾಹಿತಿ ನೀಡಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಮಾನ್ಯ ಜನರಿಗೆ ನಿವೇಶನ ಮತ್ತು ಭೂಮಿ ಹಕ್ಕುಗಳನ್ನು ಒದಗಿಸುವುದು ಇದರ ಉದ್ದೇಶ. ಕಂದಾಯ, ಆರ್‌ಡಿಪಿಆರ್ ಮತ್ತು ನಿಗಮಗಳಿಂದ ಖಾತೆ, ದಾಖಲೆಗಳು ಮತ್ತು ಹಕ್ಕುಪತ್ರಗಳನ್ನು ಇದೇ 14ರಂದು ವಿತರಿಸಲು ಯೋಜಿಸಲಾಗಿದೆ.
ಬೆಂಗಳೂರು, ಫೆಬ್ರವರಿ 12: ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನ. ಹಾಗಾಗಿ ನಾಳೆ ಹಾಗೂ ನಾಡಿದ್ದು ನೀರಾವರಿ ವಿಚಾರದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
ಬೆಲೆ ಕುಸಿತ;ರಸ್ತೆಗೆ 25 ಕ್ವಿಂಟಾಲ್ ಟೊಮ್ಯಾಟೋ ಸುರಿದು ಪ್ರತಿಭಟಿಸಿದ ರೈತರು
‘ಗೂಗಲ್ನಲ್ಲಿ ಸಿಕ್ಕ ಕಥೆ ತನ್ನದು ಅಂತಾರೆ’: ಕಿಡಿಕಾರಿದ ಡಾರ್ಲಿಂಗ್ ಕೃಷ್ಣ
ನಂಜನಗೂಡಿಗೆ ಹೋದ ದಂಪತಿ ವಾಪಸ್ ಬರುವಷ್ಟರಲ್ಲಿ ಮನೆ ಖಾಲಿ
ಬಿಲ್ ಪಾವತಿಸಲು ಲಂಚ ಪಡೆಯುತ್ತರಿವಾಗಲೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿ
