ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ಮಹೇಶ್ ಇ, ಭೂಮನಹಳ್ಳಿ Edited By:

Updated on: Feb 12, 2026 | 3:23 PM

ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಯಲ್ಲಿ ಕರ್ನಾಟಕದ 6ನೇ ಗ್ಯಾರಂಟಿ, ಭೂಮಿ ಗ್ಯಾರಂಟಿ ಕುರಿತು ಮಾಹಿತಿ ನೀಡಿದ್ದಾರೆ. ದೀರ್ಘಕಾಲದಿಂದ ಬಾಕಿ ಉಳಿದಿರುವ ಸಾಮಾನ್ಯ ಜನರಿಗೆ ನಿವೇಶನ ಮತ್ತು ಭೂಮಿ ಹಕ್ಕುಗಳನ್ನು ಒದಗಿಸುವುದು ಇದರ ಉದ್ದೇಶ. ಕಂದಾಯ, ಆರ್‌ಡಿಪಿಆರ್ ಮತ್ತು ನಿಗಮಗಳಿಂದ ಖಾತೆ, ದಾಖಲೆಗಳು ಮತ್ತು ಹಕ್ಕುಪತ್ರಗಳನ್ನು ಇದೇ 14ರಂದು ವಿತರಿಸಲು ಯೋಜಿಸಲಾಗಿದೆ.

ಬೆಂಗಳೂರು, ಫೆಬ್ರವರಿ 12: ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನ. ಹಾಗಾಗಿ ನಾಳೆ ಹಾಗೂ ನಾಡಿದ್ದು ನೀರಾವರಿ ವಿಚಾರದಲ್ಲಿ ಸಮ್ಮೇಳನವನ್ನು ಹಮ್ಮಿಕೊಂಡಿದ್ದೇವೆ. ಕೇಂದ್ರ ಮಂತ್ರಿಗಳು, ಸಿಎಂ ಸಿದ್ದರಾಮಯ್ಯ ಭಾಗಿಯಾಗುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್​ ಹೇಳಿದ್ದಾರೆ. ನವದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Loading...
Unable to load recommendations.
Follow Us
ಮಹೇಶ್ ಇ, ಭೂಮನಹಳ್ಳಿ

ಮಹೇಶ್ ಇ ಎಂಬ ನಾನು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ ಭೂಮನಹಳ್ಳಿ ಗ್ರಾಮದ ನಿವಾಸಿ. ನಮ್ಮ ಹೆಮ್ಮೆಯ ಟಿವಿ9 ತುಮಕೂರು ಜಿಲ್ಲಾ ವರದಿಗಾರನಾಗಿ ಸತತ 9 ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ನಡೆದಾಡುವ ದೇವರು ತ್ರಿವಿಧ ದಾಸೋಹಿ ಶಿವಕುಮಾರ್ ಶ್ರೀಗಳು ಲಿಂಗೈಕ್ಯರಾದಾಗ ಆ ಸುದ್ದಿ ಬಿತ್ತರ ಬಗ್ಗೆ ಹಾಗೂ ಕೊನೆ ಕ್ಷಣದಲ್ಲಿ ದೇವರ ಜೊತೆಯಿದ್ದ ಎಲ್ಲಾ ಕಾರ್ಯಕ್ರಮಗಳನ್ನ ನೋಡಿ ವರದಿ ಮಾಡಿದ್ದು ನನ್ನ ಭಾಗ್ಯ..ಬಡ ಕುಟುಂಬದಿಂದ ಬಂದಿರುವ ನನಗೆ ಟಿವಿ9 ಸಂಸ್ಥೆ ತುಮಕೂರು ಅಂತಾ ಅತಿದೊಡ್ಡ ಜಿಲ್ಲೆಯಲ್ಲಿ ಕೆಲಸ ಮಾಡಲು ಅವಕಾಶ ನೀಡಿದ್ದಕ್ಕೆ ಧನ್ಯವಾದ...