ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಕೈ ಬಿಟ್ಟ ಬಿಜೆಪಿ: ಪ್ರತಾಪ್ ಸಿಂಹ ಹೇಳಿದ್ದಿಷ್ಟು

| Updated By: ಗಂಗಾಧರ​ ಬ. ಸಾಬೋಜಿ

Updated on: Sep 28, 2024 | 8:44 PM

ನಾಳೆ ಮೈಸೂರಿನಲ್ಲಿ ಮಹಿಷ ದಸರಾ ಆಚರಣೆಗೆ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ಮಾಡುವುದಕ್ಕೆ ಪ್ಲ್ಯಾನ್​ ಮಾಡಲಾಗುತ್ತಿದೆ. ಆದರೆ ನಾಳೆ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಹೀಗಾಗಿ ನಾಳೆ ಬಿಜೆಪಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಕೈ ಬಿಟ್ಟಿದೆ. ಒಂದೇ ವೇಳೆ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ನಡೆದರೆ ಸುಮ್ಮನೆ ಇರುವುದಿಲ್ಲ ಎಂದು ಮಾಜಿ ಸಂಸದ ಪ್ರತಾಪ್ ಸಿಂಹ ಕಿಡಿಕಾರಿದ್ದಾರೆ.

ಮೈಸೂರು, ಸೆಪ್ಟೆಂಬರ್​ 28: ನಾಳೆ ಚಾಮುಂಡಿ ಬೆಟ್ಟದಲ್ಲಿ ನಿಷೇಧಾಜ್ಞೆ ಜಾರಿ ಹಿನ್ನೆಲೆ ನಾಳೆ ಬಿಜೆಪಿ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ಕೈ ಬಿಟ್ಟಿದೆ. ಈ ಬಗ್ಗೆ ನಗರದಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha) ಪ್ರತಿಕ್ರಿಯಿಸಿದ್ದು, ಜಿಲ್ಲಾಡಳಿತದ ಮೇಲೆ ನಂಬಿಕೆಯಿಟ್ಟು ಚಾಮುಂಡಿ ಚಲೋ ಕೈಬಿಟ್ಟಿದ್ದೇವೆ. ನಾಳೆ ಮಹಿಷ ಮೂರ್ತಿಗೆ ಪುಷ್ಪಾರ್ಚನೆ ನಡೆದರೆ ಸುಮ್ಮನೆ ಇರುವುದಿಲ್ಲ. ಇದನ್ನು ವಿರೋಧಿಸಿ ದಸರಾ ದಿನ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.

Follow us on