ಕುಕ್ಕೆ ಸುಬ್ರಹ್ಮಣ್ಯ ಮತ್ತೆ ನಂಬರ್‌ 1 ಶ್ರೀಮಂತ: ಬಂದ ಆದಾಯದಲ್ಲಿ 85.20 ಕೋಟಿ ರೂ.ವೆಚ್ಚ

Edited By:

Updated on: May 18, 2026 | 10:21 PM

ದಕ್ಷಿಣ ಭಾರತದ ಪ್ರಸಿದ್ದ ನಾಗಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಮತ್ತೆ ಹೊಸ ದಾಖಲೆ ಬರೆದಿದೆ. 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ ರೂಪಾಯಿಗೂ ಅಧಿಕ ಆದಾಯ ಗಳಿಸಿದೆ. ಈ ಮೂಲಕ ಸತತ 15ನೇ ವರ್ಷವೂ ದೇವಸ್ಥಾನಗಳ ಗರಿಷ್ಟ ಆದಾಯದಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಕಾಯ್ದುಕೊಂಡಿದೆ. ಈ ಕುರಿತು ಒಂದು ಡಿಟೇಲ್ಡ್ ರಿಪೋರ್ಟ್ ಇಲ್ಲಿದೆ ನೋಡಿ..

ಮಂಗಳೂರು, (ಮೇ 18): ಶ್ರೀಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ (Kukke Subrahmanya temple). ನಾಗದೋಷಕ್ಕೆ ಪರಿಹಾರ ನೀಡುವ ಅತ್ಯಂತ ಪವರ್ ಫುಲ್ ಕ್ಷೇತ್ರ. ದಕ್ಷಿಣಕನ್ನಡ (Dakshina Kannada) ಜಿಲ್ಲೆಯ ಕಡಬ ತಾಲೂಕಿನ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ದೇಶದ ಮೂಲೆ ಮೂಲೆಯಿಂದ ಭಕ್ತರು ಹರಿದು ಬರ್ತಾರೆ. ಈ ಪ್ರಸಿದ್ದ ಪುಣ್ಯಕ್ಷೇತ್ರ ಇದೀಗ ಮತ್ತೊಮ್ಮೆ ಆದಾಯದಲ್ಲಿ ಇತಿಹಾಸ ನಿರ್ಮಿಸಿದೆ. ಮುಜರಾಯಿ ಇಲಾಖೆಯ ಆಧೀನದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ 2025-26ನೇ ಸಾಲಿನ ಆರ್ಥಿಕ ವರ್ಷದಲ್ಲಿ 167 ಕೋಟಿ 89 ಲಕ್ಷ ರೂಪಾಯಿ ಆದಾಯ ಗಳಿಸಿದೆ. ಕಳೆದ ವರ್ಷ 155 ಕೋಟಿ ರೂಪಾಯಿ ಆದಾಯ ಗಳಿಸಿದ್ದ ದೇವಳ ಈ ಬಾರಿ ಸುಮಾರು 12 ಕೋಟಿ ರೂಪಾಯಿ ಹೆಚ್ಚುವರಿ ಆದಾಯ ದಾಖಲಿಸಿದೆ. ಇದೇ ಮೊದಲ ಬಾರಿಗೆ 168 ಕೋಟಿಯ ಗಡಿಗೆ ಸಮೀಪಿಸಿದ ಕುಕ್ಕೆ ದೇವಸ್ಥಾನ ರಾಜ್ಯದ ನಂಬರ್ ಒನ್ ಶ್ರೀಮಂತ ದೇವಾಲಯ ಎಂಬ ಸ್ಥಾನವನ್ನು ಮತ್ತಷ್ಟು ಗಟ್ಟಿಗೊಳಿಸಿದೆ.

_ದೇವಳದ ಪ್ರಮುಖ ಆದಾಯ ಮೂಲವೇ ಹರಕೆ ಸೇವೆಗಳು. ಸರ್ಪಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ವಿವಿಧ ಸೇವೆಗಳಿಂದಲೇ 64 ಕೋಟಿಗೂ ಅಧಿಕ ಆದಾಯ ಬಂದಿದೆ. ಕಾಣಿಕೆ ಹುಂಡಿಯಿಂದ 24 ಕೋಟಿ ರೂಪಾಯಿ, ಸಾಮಾನ್ಯ ಕಾಣಿಕೆಯಿಂದ 5 ಕೋಟಿ ರೂಪಾಯಿ, ಹೂಡಿಕೆ ಮೇಲಿನ ಬಡ್ಡಿಯಿಂದ ಸುಮಾರು 49 ಕೋಟಿ ಆದಾಯ ಬಂದಿದೆ. ಇದಷ್ಟೇ ಅಲ್ಲದೆ ಛತ್ರಗಳ ಬಾಡಿಗೆ, ಕಟ್ಟಡ ಮತ್ತು ಅಂಗಡಿಗಳ ಬಾಡಿಗೆ, ಕೃಷಿ ತೋಟದ ಉತ್ಪನ್ನ, ಅನ್ನಸಂತರ್ಪಣೆ ನಿಧಿ ಹೀಗೆ ಹಲವು ಮೂಲಗಳಿಂದ ದೇವಸ್ಥಾನಕ್ಕೆ ಕೋಟ್ಯಂತರ ರೂಪಾಯಿ ಹರಿದು ಬಂದಿದೆ.

ಇದನ್ನೂ ಓದಿ: ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ದಾಖಲೆಯ ಆದಾಯ, ಸತತ 15 ವರ್ಷಗಳ ಕಾಲ ನಂ.1

Loading...
Unable to load recommendations.
Follow Us
ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More