ಬಡ್ಗಾಮ್‌ನಲ್ಲಿ ಭದ್ರತಾ ಪಡೆಗಳ ಭರ್ಜರಿ ಬೇಟೆ: ಲಷ್ಕರ್ ಟಾಪ್ ಕಮಾಂಡರ್ ಫೌಜಿ ಮೂಸಾ ಎನ್‌ಕೌಂಟರ್‌ನಲ್ಲಿ ಹತ
ಜಮ್ಮು ಮತ್ತು ಕಾಶ್ಮೀರದ ಬಡ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಯೋಧರು, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಸಿಆರ್ಪಿಎಫ್ ಜಂಟಿ ಕಾರ್ಯಾಚರಣೆ ನಡೆಸಿ ನಿಷೇಧಿತ ಲಷ್ಕರ್-ಎ-ತೊಯ್ಬಾ ಸಂಘಟನೆಯ ಟಾಪ್ ಕಮಾಂಡರ್ ಫೌಜಿ ಮೂಸಾ ಅಲಿಯಾಸ್ ಸುಲೈಮಾನ್ ಷಾ ಮಟಾಷ್ನನ್ನು ಹತ್ಯೆ ಮಾಡಿದ್ದಾರೆ. ಸೆಪ್ಟೆಂಬರ್ 5 ರಂದು ನಡೆದ ಎನ್ಕೌಂಟರ್ ವೇಳೆ ತಪ್ಪಿಸಿಕೊಂಡಿದ್ದ ಈ ಉಗ್ರ ಈಗ ಭದ್ರತಾ ಪಡೆಗಳ ಕೈಯಲ್ಲಿ ಸಾವನ್ನಪ್ಪಿದ್ದಾನೆ.
ಶ್ರೀನಗರ, ಸೆಪ್ಟೆಂಬರ್ 30: ಜಮ್ಮು ಮತ್ತು ಕಾಶ್ಮೀರದ ಬಡ್ಗಾಮ್ ಜಿಲ್ಲೆಯಲ್ಲಿ ಭಾರತೀಯ ಭದ್ರತಾ ಪಡೆಗಳು ಭರ್ಜರಿ ಕಾರ್ಯಾಚರಣೆ ನಡೆಸಿವೆ. ನಿಷೇಧಿತ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಆಗಿದ್ದ ಫೌಜಿ ಮೂಸಾ ಅಲಿಯಾಸ್ ಸುಲೈಮಾನ್ ಷಾ ಮಟಾಷ್ನನ್ನು ಹತ್ಯೆ ಮಾಡಲಾಗಿದೆ. ಈ ಯಶಸ್ವಿ ಕಾರ್ಯಾಚರಣೆಯನ್ನು ಭಾರತೀಯ ಸೇನೆ, ಜಮ್ಮು-ಕಾಶ್ಮೀರ ಪೊಲೀಸ್ ಹಾಗೂ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್ಪಿಎಫ್) ಜಂಟಿಯಾಗಿ ನಡೆಸಿವೆ.
ಎಲ್‌ಇಟಿ ಸಂಘಟನೆಯ ಟಾಪ್ ಕಮಾಂಡರ್ ಆಗಿದ್ದ ಫೌಜಿ ಮೂಸಾ, ಈ ಪ್ರದೇಶದಲ್ಲಿ ಹಲವಾರು ಭಯೋತ್ಪಾದಕ ಕೃತ್ಯಗಳ ಹಿಂದಿದ್ದ. ಕಳೆದ ಸೆಪ್ಟೆಂಬರ್ 5 ರಂದು ನಡೆದ ಎನ್ಕೌಂಟರ್ ಒಂದರಲ್ಲಿ ಮೂಸಾ ತಪ್ಪಿಸಿಕೊಂಡಿದ್ದ. ಆದರೆ, ಭದ್ರತಾ ಪಡೆಗಳು ನಿರಂತರವಾಗಿ ನಡೆಸಿದ ಕಾರ್ಯಾಚರಣೆಗಳ ಫಲವಾಗಿ, ಇದೀಗ ಆತನನ್ನು ಹತ್ಯೆಗೈಯ್ಯಲಾಗಿದೆ. ಇದು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಭಾರತೀಯ ಭದ್ರತಾ ಪಡೆಗಳಿಗೆ ಲಭಿಸಿದ ಮಹತ್ವದ ಯಶಸ್ಸು ಎಂದು ಪರಿಗಣಿಸಲಾಗಿದೆ. ಜಮ್ಮು ಕಾಶ್ಮೀರದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಈ ಕಾರ್ಯಾಚರಣೆಯು ಪ್ರಮುಖ ಹೆಜ್ಜೆಯಾಗಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
