ವಿಧಾನ ಸಭೆಯಲ್ಲಿ ಪಾಕಿಸ್ತಾನ್ ಪರ ಘೋಷಣೆ: ಗೃಹ ಸಚಿವರ ನಿವಾಸಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳ ದೌಡು

|

Updated on: Feb 28, 2024 | 5:35 PM

ಹೇಳಿಕೆಯೊಂದನ್ನು ನೀಡಿರುವ ಪರಮೇಶ್ವರ್, ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಆದರೆ ಸರಿಯಾದ ಮಾಹಿತಿ ಲಭ್ಯವವಾಗುತ್ತಿಲ್ಲ, ಭಿನ್ನ ಹೇಳಿಕೆಗಳು ವ್ಯಕ್ತವಾಗಿವೆ, ಈಗಾಗಲೇ ಒಂದು ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ ಮತ್ತು ಬಿಜೆಪಿ ನಾಯಕರು ನೀಡಿರುವ ದೂರನ್ನು ಅದಕ್ಕೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. ಅಧಿಕೃತವಾಗಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ಸೆರೆಯಾಗಿರುವ ದೃಶ್ಯವನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ಬೆಂಗಳೂರು: ನಿನ್ನೆ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಾ ಸಯ್ಯದ್ ನಾಸಿರ್ ಹುಸ್ಸೇನ್ (Dr Sayed Nassir Hussain) ಅವರು ಗೆದ್ಡ ಘೋಷಣೆಯಾದ ಬಳಿಕ ಅವರ ಬೆಂಬಲಿಗರು ವಿಧಾನ ಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ (Pakistan Zindabad) ಅಂತ ಕೂಗಿದರು ಎಂದು ಬಿಜೆಪಿ ಮಾಡುತ್ತಿರುವ ಆರೋಪ ರಾಜ್ಯ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಿದೆ. ಬಿಜೆಪಿ ನಾಯಕರು ಈಗಾಗಲೇ ದೂರೊಂದನ್ನು ಸಲ್ಲಿಸಿದ್ದಾರೆ. ವಿಷಯಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಕಮೀಶನರ್ ಬಿ ದಯಾನಂದ ಗೃಹ ಸಚಿವ ಜಿ ಪರಮೇಶ್ವರ್ (G Parameshwara) ಅವರನ್ನು ಭೇಟಿಯಾಗಿದ್ದಾರೆ ಮತ್ತು ಇಂದು ಬೆಳಗಿನ ಸಮಯ ಕಾನೂನು ಮತ್ತು ಸುವ್ಯವಸ್ಥೆ ಎಡಿಜಿಪಿ ಆರ್ ಹಿತೇಂದ್ರ ಗೃಹ ಸಚಿವರ ನಿವಾಸಕ್ಕೆ ದೌಡಾಯಿಸಿದರು. ನಿನ್ನೆಯೇ ಹೇಳಿಕೆಯೊಂದನ್ನು ನೀಡಿರುವ ಪರಮೇಶ್ವರ್, ವಿಷಯವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ, ಆದರೆ ಸರಿಯಾದ ಮಾಹಿತಿ ಲಭ್ಯವವಾಗುತ್ತಿಲ್ಲ, ಭಿನ್ನ ಹೇಳಿಕೆಗಳು ವ್ಯಕ್ತವಾಗಿವೆ, ಈಗಾಗಲೇ ಒಂದು ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ ಮತ್ತು ಬಿಜೆಪಿ ನಾಯಕರು ನೀಡಿರುವ ದೂರನ್ನು ಅದಕ್ಕೆ ಸೇರಿಸಲಾಗಿದೆ ಎಂದು ಹೇಳಿದ್ದಾರೆ. ಅಧಿಕೃತವಾಗಿ ಪಾಕಿಸ್ತಾನ್ ಪರ ಘೋಷಣೆ ಕೂಗಿದ್ದು ಸೆರೆಯಾಗಿರುವ ದೃಶ್ಯವನ್ನು ವಶಕ್ಕೆ ಪಡೆದು ತನಿಖೆ ನಡೆಸಲಾಗುವುದು ಎಂದು ಪರಮೇಶ್ವರ್ ಹೇಳಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ವಿಧಾನಸೌಧದಲ್ಲಿ ರಾಜ್ಯಸಭಾ ಗೆಲುವಿನ ಸಂಭ್ರಮದ ವೇಳೆ ಮೊಳಗಿದ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ!

Published On - 10:33 am, Wed, 28 February 24

Follow us on