ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ; ಬಿಸಲಿನ ಬೇಗೆಗೆ ಕಂಗೆಟ್ಟಿದ್ದ ಜನರಿಗೆ ತಂಪೆರೆದ ವರುಣ

Edited By: ಕಿರಣ್ ಹನುಮಂತ್​ ಮಾದಾರ್

Updated on: Apr 10, 2024 | 8:52 PM

ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಇಂದು(ಏ.10) ಧಾರವಾಡ ಜಿಲ್ಲೆಯ ಹುಬ್ಬಳ್ಳಿ(Hubballi) ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.

ಹುಬ್ಬಳ್ಳಿ, ಏ.10: ರಾಜ್ಯದಲ್ಲಿ ಭೀಕರ ಬರಗಾಲ ತಾಂಡವವಾಡುತ್ತಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದೆ. ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿದ್ದಾರೆ. ಈ ಮಧ್ಯೆ ಇಂದು(ಏ.10) ಧಾರವಾಡ ಜಿಲ್ಲೆಯ ಹುಬ್ಬಳ್ಳಿ(Hubballi) ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಮಳೆಯಿಂದ ಕೆಲಕಾಲ ಜನಜೀವನ ಅಸ್ತವ್ಯಸ್ತವಾಗಿದೆ. ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಶಿವಕುಮಾರ್ ಪತ್ತಾರ್

ಶಿವಕುಮಾರ್ ಎಸ್ ಪತ್ತಾರ.. ಹುಟ್ಟಿದ್ದು ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ. ಪತ್ರಿಕೋದ್ಯಮ ದಲ್ಲಿ ಕರ್ನಾಟಕ ವಿವಿಯಿಂದ ಸ್ನಾತಕೋತ್ತರ ಪದವಿ ಪಡೆದಿದ್ದೇನೆ.‌ಕಳೆದ 10 ವರ್ಷಗಳಿಂದ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ.ಕೊಪ್ಪಳದಿಂದ ಆರಂಭವಾಗಿರೋ ವೃತ್ತಿ ಬದುಕು ‌ಸದ್ಯ ಹುಬ್ಬಳ್ಳಿಗೆ ಬಂದು ನಿಂತಿದೆ.ಈ ಮದ್ಯೆ ರಾಯಚೂರು,ಬಳ್ಳಾರಿ,ವರದಿಗಾರನಾಗಿ ಕೆಲಸ ಮಾಡಿದ್ದೇನೆ.ರಹಸ್ಯ ಕಾರ್ಯಾಚರಣೆ ನನಗಿಷ್ಟ.ಟಿವಿ9 ನಲ್ಲಿ ಕೆಲ ರಹಸ್ಯ ಕಾರ್ಯಾಚರಣೆಗಳ ವರದಿಯನ್ನು ಮಾಡಿದ್ದೇನೆ.ಕ್ರೈಮ್, ಜನರ ಬದುಕು ಬವಣೆಯ ಸುದ್ದಿಗಳನ್ನೇ ಮಾಡಿದ್ದೇ ಹೆಚ್ಚು.

Read More