ಚಿಕ್ಕಮಗಳೂರಿನಲ್ಲಿ ಧಾರಾಕಾರ ಮಳೆ; ಹಲವೆಡೆ ವಾಹನ ಸಂಚಾರ ಸ್ಥಗಿತ
ಚಿಕ್ಕಮಗಳೂರು(Chikmagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಕೊಪ್ಪ, ಕಳಸ, ಎನ್.ಆರ್.ಪುರ ತಾಲೂಕಿನಲ್ಲಿ ಗುಡುಗು ಮಿಂಚು ಸಹಿತ ವರುಣಾರ್ಭಟ ಜೋರಾಗಿದೆ. ಜೊತೆಗೆ ಕುದುರೆಮುಖ ಸಂಪರ್ಕ ಕಡಿತವಾಗಿದೆ. ಮುಂಜಾಗ್ರತಾ ಕ್ರಮವಾಗಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ.
ಚಿಕ್ಕಮಗಳೂರು, ಅ.01: ಚಿಕ್ಕಮಗಳೂರು(Chikmagaluru) ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಿಕ್ಕಮಗಳೂರು, ಕೊಪ್ಪ, ಕಳಸ, ಎನ್.ಆರ್.ಪುರ ತಾಲೂಕಿನಲ್ಲಿ ಗುಡುಗು ಮಿಂಚು ಸಹಿತ ವರುಣಾರ್ಭಟ ಜೋರಾಗಿದೆ. ಜೊತೆಗೆ ಎನ್.ಆರ್.ಪುರ ತಾಲೂಕಿನ ಮಾಗುಂಡಿ ಬಳಿಯ ಮಹಲ್ಗೋಡು ಸೇತುವೆ ಮುಳುಗಡೆಯಾಗಿದ್ದು, ಬಾಳೆಹೊನ್ನೂರು, ಕಳಸ, ಹೊರನಾಡು, ಕುದುರೆಮುಖ ಸಂಪರ್ಕ ಕಡಿತವಾಗಿದೆ. ಮುಂಜಾಗ್ರತಾ ಕ್ರಮವಾಗಿ ರಸ್ತೆಗೆ ಅಡ್ಡಲಾಗಿ ಬ್ಯಾರಿಕೇಡ್ ಅಳವಡಿಕೆ ಮಾಡಲಾಗಿದೆ. ಇತ್ತ ವಾಹನ ಸವಾರರು ಪರದಾಟ ನಡೆಸಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ