ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಭಾರೀ ಮಳೆ: ಸಿಎಸ್ ಪಾಟೀಲ್
ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾದ ಕಾರಣ ಮಹಾರಾಷ್ಟ್ರದ ಮುಂಬೈ ಸೇರಿದಂತೆ ಹಲವು ಪ್ರದೇಶ ಮತ್ತು ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು ರೆಡ್ ಅಲರ್ಟ್ ಘೋಷಿಸಲಾಗಿದೆ ಎಂದು ಹೇಳಿದ ಪಾಟೀಲ್ ಬೆಂಗಳೂರಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದ್ದು ಯಾವುದೇ ಅಲರ್ಟ್ ಘೋಷಣೆ ಮಾಡಿಲ್ಲ ಎಂದರು.
ಬೆಂಗಳೂರು, ಮೇ 26: ಈ ಬಾರಿ ಮೇ ತಿಂಗಳಲ್ಲೇ ಮಳೆ ಸುರಿಯುತ್ತಿರೋದು ಹವಾಮಾನ ವೈಚಿತ್ರ್ಯವೇನೂ ಅಲ್ಲ, ಕೆಲವು ಸಲ ಹೀಗಾಗೋದುಂಟು, ಉಳಿದ ಸಲ ಮೇನಲ್ಲಿ ಮಳೆಯೇ ಆಗೋದಿಲ್ಲ ಎಂದು ಹವಾಮಾನ ತಜ್ಞ ಸಿಎಸ್ ಪಾಟೀಲ್ ಹೇಳಿದರು. ನಮ್ಮ ವರದಿಗಾರನೊಂದಿಗೆ ಮಾತಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ವಾಡಿಕೆಗಿಂತ ಜಾಸ್ತಿ ಮಳೆಯಾಗಿದೆ, ಬಳ್ಳಾರಿ ಜಿಲ್ಲೆಯೊಂದನ್ನು ಬಿಟ್ಟು ಬೇರೆಲ್ಲ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಹೇಳಿದರು. ಮುಂದಿನ 5 ದಿನಗಳಲ್ಲಿ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರಾಂತ್ಯ-ಒಟ್ಟಿನಲ್ಲಿ ರಾಜ್ಯದ ಎಲ್ಲ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಪಾಟೀಲ್ ಹೇಳಿದರು.
ಇದನ್ನೂ ಓದಿ: ಅರಬ್ಬೀ ಸಮುದ್ರದಲ್ಲಿ ಆಗಿರುವ ವಾಯುಭಾರ ಕುಸಿತದಿಂದ ರಾಜ್ಯಾದ್ಯಂತ ಮೇ 28ರವರೆಗೆ ಭಾರೀ ಮಳೆ: ಹವಾಮಾನ ಇಲಾಖೆ
ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ

