ರಾಜ್ಯದ ಹಲವಾರು ಭಾಗಗಳಲ್ಲಿ ಧಾರಾಕಾರ ಮಳೆ; ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳಿಗೆ ರಜೆ ಘೋಷಣೆ
ಮಳೆಯ ಆರ್ಭಟ ಉತ್ತರ ಕನ್ನಡ ಜಿಲ್ಲೆಯಲ್ಲೂ ಜೋರಾಗಿದೆ. ಜಿಲ್ಲೆಯ ಹಳಿಯಾಳ, ದಾಂಡೇಲಿ, ಯಲ್ಲಾಪುರ ಮತ್ತು ಜೋಯಿಡಾಗಳಲ್ಲಿ ನಿಲ್ಲದೆ ಮಳೆಯಾಗುತ್ತಿರುವುದರಿಂದ ಅಂಗನವಾಡಿ ಕೇಂದ್ರ, ಶಾಲಾ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಳಗಾವಿಯ ಖಾನಾಪುರ ಮತ್ತು ಬೆಳಗಾವಿ ತಾಲೂಕುಗಳಲ್ಲೂ ಮಳೆಯಾಗುತ್ತಿದ್ದು ಶಾಲೆ, ಕಾಲೇಜು ಮತ್ತು ಅಂಗನವಾಡಿ ಕೇಂದ್ರಗಳನ್ನು ಮುಚ್ಚಲು ಆದೇಶಿಸಲಾಗಿದೆ.
ಹಾಸನ, ಜೂನ್ 25: ಕೇವಲ ಹಾಸನ ಜಿಲ್ಲೆ ಮಾತ್ರವಲ್ಲ ರಾಜ್ಯದ ನಾನಾಭಾಗಗಲ್ಲಿ ಜೋರಾಗಿ ಮಳೆಯಾಗುತ್ತಿದೆ. ಹಾಸನ ಜಿಲ್ಲೆಯ ಸಕಲೇಶಪುರ, ಅರಕಗೂಡು ಮತ್ತು ಆಲೂರು ತಾಲೂಕುಗಳಲ್ಲಿ ನಿನ್ನೆ ರಾತ್ರಿಯಿಂದ ಮಳೆ ಸುರಿಯುತ್ತಿದ್ದು ಈ ತಾಲೂಕುಗಳ ಎಲ್ಲ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲೆಯ ಮಡಿಕೇರಿ ಮತ್ತು ಪೊನ್ನಂಪೇಟೆ ತಾಲೂಕುಗಳಲ್ಲೂ ಸತತವಾಗಿ ಮಳೆ ಸುರಿಯುತ್ತಿರುವ ಕಾರಣ ಅಲ್ಲಿನ ಶಾಲಾ, ಕಾಲೇಜುಗಳು ಮತ್ತು ಅಂಗನವಾಡಿ ಕೇಂದ್ರಗಳನ್ನು ಇವತ್ತಿನ ಮಟ್ಟಿಗೆ ಮುಚ್ಚಲು ಜಿಲ್ಲಾಧಿಕಾರಿಗಳ ಕಚೇರಿಯಿಂದ ಆದೇಶ ಹೋಗಿದೆ.
ಇದನ್ನೂ ಓದಿ: ಕರ್ನಾಟಕದಲ್ಲಿ ಭಾರಿ ಮಳೆ ಮುನ್ಸೂಚನೆ: ವಿವಿಧ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Jun 25, 2025 10:21 AM
Latest Videos