ತರೀಕೆರೆಯಲ್ಲಿ ಧಾರಾಕಾರ ಮಳೆ; ಹೆದ್ದಾರಿ ಜಲಾವೃತ, ವಾಹನ ಸವಾರರ ಪರದಾಟ
ಜಿಲ್ಲೆಯಾದ್ಯಂತ ಗುಡುಗು ಸಹಿತ ಭರ್ಜರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತೀರಾ ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿನಾಡಿನ ಮಲೆನಾಡಿನ ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಹಾಗೂ ಮೂಡಿಗೆರೆ ತಾಲೂಕುಗಳು ಸೇರಿದಂತೆ ಚಿಕ್ಕಮಗಳೂರು(Chikkamagaluru) ತಾಲೂಕಿನ ಮಲೆನಾಡು ಪ್ರದೇಶಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ.
ಚಿಕ್ಕಮಗಳೂರು, ಏ.13: ಜಿಲ್ಲೆಯಾದ್ಯಂತ ಗುಡುಗು ಸಹಿತ ಭರ್ಜರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತೀರಾ ಬಿಸಿಲಿನಿಂದ ಕಂಗೆಟ್ಟಿದ್ದ ಕಾಫಿನಾಡಿನ ಮಲೆನಾಡಿನ ಶೃಂಗೇರಿ, ಎನ್.ಆರ್.ಪುರ, ಕೊಪ್ಪ ಹಾಗೂ ಮೂಡಿಗೆರೆ ತಾಲೂಕುಗಳು ಸೇರಿದಂತೆ ಚಿಕ್ಕಮಗಳೂರು(Chikkamagaluru) ತಾಲೂಕಿನ ಮಲೆನಾಡು ಪ್ರದೇಶಗಳಲ್ಲಿ ಕಳೆದ ಎರಡು ಮೂರು ದಿನಗಳಿಂದ ಧಾರಾಕಾರವಾಗಿ ಮಳೆಯಾಗುತ್ತಿದೆ. ಮಲೆನಾಡು ಭಾಗದ ರೈತರು ಅಡಕೆ ಹಾಗೂ ಕಾಫಿ ಬೆಳೆಗಾರರು ಬೆಳೆಗಳನ್ನ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದರೆ, ಇತ್ತ ಹೆದ್ದಾರಿಯಲ್ಲಿ ನೀರು ತುಂಬಿಕೊಂಡು ವಾಹನ ಸವಾರರು ಹರಸಾಹಸ ಪಡಬೇಕಾಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ