ಬುಧವಾರ ರಾತ್ರಿ ಕೊಪ್ಪಳ ಜಿಲ್ಲೆಯಲ್ಲಿ ಭಾರೀ ಮಳೆ, ಕಂಗಾಲಾಗಿದ್ದ ರೈತರಲ್ಲಿ ನಿರಾಳತೆಯ ಭಾವ
ಕಳೆದ 3-4 ದಿನಗಳಿಂದ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ ನಿನ್ನೆ ಕಲಬುರಗಿ, ಬೀದರ್, ಯಾದಗಿರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಜೋಳ ಪ್ರಮುಖ ಬೆಳೆಯಾಗಿರುವುದರಿಂದ ಮಳೆ ಬೆಳೆಗೆ ಅನುಕೂಲಕರ ಅಂತ ಹೇಳಲಾಗುತ್ತಿದೆ.
ಕೊಪ್ಪಳ: ಮಾನ್ಸೂನ್ ಸೀಸನಲ್ಲಿ (Monsoon season) ತೀವ್ರವಾಗಿ ಮುನಿಸಿಕೊಂಡಿದ್ದ ವರುಣ ಈಗ ಹಿಂಗಾರಿನಲ್ಲಿ (Rabi season) ಕೃಪೆ ತೋರಲಾರಂಭಿಸಿದ್ದಾನೆ. ರಾಜ್ಯದ ಹಲವಾರು ಭಾಗಗಳಲ್ಲಿ ಮಳೆಯಾಗುತ್ತಿದೆ. ದೃಶ್ಯಗಳಲ್ಲಿ ಕಾಣುವ ಹಾಗೆ ಕೊಪ್ಪಳ ಜಿಲ್ಲೆಯ (Koppal district) ಬಹುತೇಕ ಪ್ರದೇಶಗಳಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿದೆ. ಕುಕನೂರು ತಾಲ್ಲೂಕಿನಲ್ಲಂತೂ ಕುಂಭದ್ರೋಣ! ತಾಲ್ಲೂಕಿನ ನಾನಾ ಗ್ರಾಮಗಳಲ್ಲಿನ ಹಳ್ಳಕೊಳ್ಳಗಳು ತುಂಬಿ ಹರಿಯುತ್ತಿವೆ. ಸೇತುವೆಗಳ ಮೇಲೂ ನೀರು ಹರಿಯುತ್ತಿರುವುದರಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಮಳೆಯಿಲ್ಲದೆ ಕಂಗಾಲಾಗಿದ್ದ ಭಾಗದ ರೈತರು ರಾತ್ರಿ ಸುರಿದ ಮಳೆಯಿಂದ ನಿರಾಳರಾಗಿದ್ದಾರೆ. ಕಳೆದ 3-4 ದಿನಗಳಿಂದ ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗುತ್ತಿದೆ. ಲಭ್ಯವಿರುವ ಮಾಹಿತಿಯ ಪ್ರಕಾರ ನಿನ್ನೆ ಕಲಬುರಗಿ, ಬೀದರ್, ಯಾದಗಿರಿ ಮತ್ತು ಧಾರವಾಡ ಜಿಲ್ಲೆಗಳಲ್ಲಿ ಮಳೆಯಾಗಿದೆ. ಈ ಜಿಲ್ಲೆಗಳಲ್ಲಿ ಜೋಳ ಪ್ರಮುಖ ಬೆಳೆಯಾಗಿರುವುದರಿಂದ ಮಳೆ ಬೆಳೆಗೆ ಅನುಕೂಲಕರ ಅಂತ ಹೇಳಲಾಗುತ್ತಿದೆ.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 11:13 am, Thu, 9 November 23