ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ

Edited By:

Updated on: May 09, 2025 | 2:17 PM

ಭಾರತ ಹಾಗೂ ಪಾಕಿಸ್ತಾನ ನಡುವೆ ಉದ್ವಿಗ್ನ ಪರಿಸ್ಥಿತಿಯ ಕಾರಣ ಕರ್ನಾಟಕದ ಜಲಾಶಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ರಾಜ್ಯದ ಪ್ರಮುಖ ಕೆಆರ್​ಎಸ್, ತುಂಗಭದ್ರಾ ಡ್ಯಾಂಗಳು ಸೇರಿದಂತೆ ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯಕ್ಕೂ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಹಾರಂಗಿ ಜಲಾಶಯದಲ್ಲಿ ಭದ್ರತೆ ಹೆಚ್ಚಿಸಿರುವ ವಿಡಿಯೋ ಇಲ್ಲಿದೆ.

ಮಡಿಕೇರಿ, ಮೇ 9: ಕೊಡಗು ಜಿಲ್ಲೆ ಕುಶಾಲನಗರ ತಾಲೂಕಿನ ಹಾರಂಗಿ ಜಲಾಶಯದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಭಾರತ ಮತ್ತು ಪಾಕಿಸ್ತಾನ ನಡುವಣ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ಆಡಳಿತ ಡ್ಯಾಂಗೆ ಬಿಗಿ ಭದ್ರತೆ ಕಲ್ಪಿಸಿದೆ. ಹಾರಂಗಿ ಜಲಾಶಯಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧಿಸಿ ನೀರಾವರಿ ಇಲಾಖೆ ಆದೇಶ ಹೊರಡಿಸಿದೆ. ಹೆಚ್ಚಿನ ಭದ್ರತಾ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ.

ವಿಡಿಯೋ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ