ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಚೂರು ಆಯ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ

ಮಳೆಗಾಲ ಬಂತೆಂದರೆ ಪ್ರವಾಸಿಗರನ್ನ ಜಲಪಾತಗಳು ಸೆಳೆಯುತ್ತದೆ. ಅದರಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದ್ದು, ಅಪಾಯದ ಅರಿವಿಲ್ಲದೆ ಬಂಡೆಗಲ್ಲುಗಳ‌ ಮೇಲೆ ಕುಳಿತು ಸಾರ್ವಜನಿಕರು ಊಟ ಮಾಡುತ್ತಿದ್ದಾರೆ.

ಗೋಕಾಕ್ ಜಲಪಾತದಲ್ಲಿ ಪ್ರವಾಸಿಗರ ಹುಚ್ಚಾಟ; ಚೂರು ಆಯ ತಪ್ಪಿದರೂ ಅಪಾಯ ಕಟ್ಟಿಟ್ಟ ಬುತ್ತಿ
|

Updated on: Jul 07, 2024 | 4:57 PM

ಬೆಳಗಾವಿ, ಜು.07: ಗೋಕಾಕ್ ಜಲಪಾತ(Gokak Falls)ದಲ್ಲಿ ಪ್ರವಾಸಿಗರ ಹುಚ್ಚಾಟ ಮೀತಿಮೀರಿದ್ದು, 180 ಅಡಿ ಮೇಲಿಂದ ನೀರು ದುಮ್ಮಿಕ್ಕುವ ಸ್ಥಳಗಳಲ್ಲಿ ಸಾವಿನ ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ. ಹೌದು, ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನಲ್ಲಿರುವ ಜಲಪಾತದಲ್ಲಿ ಅಪಾಯದ ಅರಿವಿಲ್ಲದೆ ಬಂಡೆಗಲ್ಲುಗಳ‌ ಮೇಲೆ ಕುಳಿತು ಸಾರ್ವಜನಿಕರು ಊಟ ಮಾಡುತ್ತಿದ್ದಾರೆ. ಇನ್ನು ಇಷ್ಟೇಲ್ಲಾ ಅಗುತ್ತಿದ್ದರೂ ಜಲಪಾತಕ್ಕೆ ಭದ್ರತೆ ‌ಒದಗಿಸದೆ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ. ಚೂರು ಆಯ ತಪ್ಪಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ. ಇನ್ನು ಯುವಕರ, ಮಹಿಳೆಯರು ಮಕ್ಕಳು ಸೇರಿದಂತೆ ಜಲಪಾತದ ತುದಿಯಲ್ಲಿ ಹುಚ್ಚಾಟ ಮಾಡುತ್ತಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us