ಮೈಸೂರು: ನೀರು ಕುಡಿಯುತ್ತಾ ಕ್ಯಾಮೆರಾಗೆ ಪೋಸ್ ಕೊಟ್ಟ ಹುಲಿ; ಅಪರೂಪದ ದೃಶ್ಯ ನೋಡಿ
ಇಂದು (ಡಿಸೆಂಬರ್ 12) ಸಫಾರಿ ವೇಳೆಯಲ್ಲಿ ಪ್ರವಾಸಿಗರಿಗೆ ಹುಲಿ ಕಾಣಿಸಿಕೊಂಡಿದೆ. ಅದರಲ್ಲೂ ಹುಲಿ ನೀರು ಕುಡಿಯುತ್ತಿರುವ ದೃಶ್ಯ ಎಲ್ಲರನ್ನೂ ಆಕರ್ಷಿಸಿದೆ. ಇತ್ತೀಚೆಗೆ ಹೆಚ್ಚಾಗಿ ಹುಲಿಗಳು ಕಾಣಿಸಿಕೊಳ್ಳುತ್ತಿರುವುದು ಸಫಾರಿಗೆ ಹೋದವರ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗುತ್ತಿವೆ.
ಮೈಸೂರು: ವೀಕೆಂಡ್ನಲ್ಲಿ ಸಫಾರಿಗೆ ಹೋಗುವುದು ಇತ್ತೀಚೆಗೆ ಟ್ರೆಂಡ್ ಆಗಿದೆ. ಇದಕ್ಕೆ ಅನುಗುಣವಾಗಿ ಸಫಾರಿ ವೇಳೆಯಲ್ಲಿ ಪ್ರಾಣಿಗಳು ಕಾಣಿಸಿಕೊಳ್ಳತ್ತಿದ್ದು, ಪ್ರಾಣಿ ಪ್ರಿಯರಿಗೆ ಮತ್ತಷ್ಟು ಖುಷಿ ನೀಡುತ್ತಿದೆ. ಹೀಗೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವೀರನಹೊಸಹಳ್ಳಿ ಬಳಿಯ ನಾಗರಹೊಳೆ ಅರಣ್ಯ ಪ್ರದೇಶಕ್ಕೂ ಕೂಡ ಅನೇಕರು ಸಫಾರಿಗೆ ಬರುತ್ತಾರೆ. ಇಂದು (ಡಿಸೆಂಬರ್ 12) ಸಫಾರಿ ವೇಳೆಯಲ್ಲಿ ಪ್ರವಾಸಿಗರಿಗೆ ಹುಲಿ ಕಾಣಿಸಿಕೊಂಡಿದೆ. ಅದರಲ್ಲೂ ಹುಲಿ ನೀರು ಕುಡಿಯುತ್ತಿರುವ ದೃಶ್ಯ ಎಲ್ಲರನ್ನೂ ಆಕರ್ಷಿಸಿದೆ. ಇತ್ತೀಚೆಗೆ ಹೆಚ್ಚಾಗಿ ಹುಲಿಗಳು ಕಾಣಿಸಿಕೊಳ್ಳುತ್ತಿರುವುದು ಸಫಾರಿಗೆ ಹೋದವರ ಕ್ಯಾಮೆರಾದಲ್ಲಿ ಈ ದೃಶ್ಯಗಳು ಸೆರೆಯಾಗುತ್ತಿವೆ.
ಇದನ್ನೂ ಓದಿ:
ನಾಗರಹೊಳೆ ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಹುಲಿ, ಕರಡಿ; ವಿಡಿಯೋ ನೋಡಿ