ಪ್ರವಾಸಿಗರ ಮೇಲೆ ಅತ್ಯಾಚಾರ ಕೇಸ್: ಇದು ಸರ್ಕಾರದ ವೈಫಲ್ಯ ಎಂದ ಪ್ರಲ್ಹಾದ್ ಜೋಶಿ
ಹುಬ್ಬಳ್ಳಿಯಲ್ಲಿ ವಿದೇಶಿ ಮಹಿಳೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಕರ್ನಾಟಕ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪೊಲೀಸರ ನಿಷ್ಕ್ರಿಯತೆ ಮತ್ತು ರಾಜಕೀಯ ಹಸ್ತಕ್ಷೇಪದ ಆರೋಪ ಮಾಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
ಹುಬ್ಬಳ್ಳಿ, ಮಾರ್ಚ್ 09: ವಿದೇಶಿ ಮಹಿಳೆ ಸೇರಿದಂತೆ ಇಬ್ಬರ ಮೇಲೆ ಅತ್ಯಾಚಾರ ಪ್ರಕರಣ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi), ಇದು ರಾಜ್ಯ ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ವಾಗ್ದಾಳಿ ಮಾಡಿದ್ದಾರೆ. ರಾಜ್ಯದಲ್ಲಿ ಪೊಲೀಸ್ ಅಧಿಕಾರಿಗಳ ನೇಮಕಾತಿಗೆ ಹರಾಜು ನಡೆಯುತ್ತಿದೆ. ಕಾನೂನು ಸುವ್ಯವಸ್ಥೆಗಿಂತ ಹರಾಜಿನಲ್ಲಿ ಕೊಟ್ಟ ಹಣದ ಬಗ್ಗೆ ಚಿಂತೆ ಇರುತ್ತೆ. ಸಿಎಂ ಕೇವಲ ಟ್ವೀಟ್ ಮಾಡಿದರೆ ಸಾಲದು, ತಪ್ಪಿತಸ್ಥರ ವಿರುದ್ಧ ಕ್ರಮ ಆಗಲಿ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.