ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ

|

Updated on: Oct 06, 2024 | 5:04 PM

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಸಮುದ್ರದಲ್ಲಿ ಬೆಂಗಳೂರು ಮೂಲದ ಓರ್ವ ವಿದ್ಯಾರ್ಥಿ ಮೃತಪಟ್ಟಿದ್ದಾನೆ. ಹೀಗಾಗಿ ಪೊಲೀಸರು ಮುರುಡೇಶ್ವರ ಕಡಲ ತೀರದಲ್ಲಿ ಪ್ರವಾಸಿಗರಿಗೆ ನಿರ್ಬಂಧಿಸಿದ್ದಾರೆ. ದಸರಾ ರಜೆ ಮತ್ತು ವೀಕೆಂಡ್ ಎಂಜಾಯ್ ಮಾಡಲು ಬಂದ ಪ್ರವಾಸಿಗರು ಬೇಸರದಿಂದ ತಮ್ಮೂರಿಗೆ ಮರಳುತ್ತಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಮುರುಡೇಶ್ವರ ಕಡಲಿನಲ್ಲಿ (Murudeshwar Beach) ಮುಳುಗಿ ಬೆಂಗಳೂರು ಮೂಲದ ವಿದ್ಯಾರ್ಥಿ ಮೃತಪಟ್ಟ ಹಿನ್ನೆಲೆಯಲ್ಲಿ ಸಮುದ್ರಕ್ಕೆ ಇಳಿಯದಂತೆ ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಈ ವಿಚಾರ ತಿಳಿದು ದಸರಾ ರಜೆ ಮತ್ತು ವೀಕೆಂಡ್ ಎಂಜಾಯ್ ಮಾಡಲು ಬಂದ ಪ್ರವಾಸಿಗರು ಬೇಸರದಿಂದ ತಮ್ಮೂರಿಗೆ ಮರಳುತ್ತಿದ್ದಾರೆ. ಮುರುಡೇಶ್ವರ ಕಡಲ ತೀರದಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಪ್ರವಾಸಿಗರಿಂದ ತುಂಬಿ ತುಳಿಕುತಿದ್ದ ಮುರುಡೇಶ್ವರ ಕಡಲ ತೀರ ಖಾಲಿ ಖಾಲಿ ಆಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published on: Oct 06, 2024 05:02 PM