ಮಂಜು ಮುಸುಕಿದ ಹಾದಿ, ಬೆಟ್ಟ-ಗುಡ್ಡಗಳ ಅದ್ಭುತ ಸೌಂದರ್ಯ: ಹೇಗಿದೆ ನೋಡಿ ಆಗುಂಬೆಯ ಸೊಬಗು

Edited By:

Updated on: Jul 07, 2026 | 5:22 PM

ಮಳೆಗಾಲ ಶುರುವಾಯ್ತು ಅಂದ್ರೆ ಸಾಕು ಕರ್ನಾಟಕದ "ಚಿರಾಪುಂಜಿ" ಎಂಬ ಪ್ರಸಿದ್ಧಿ ಪಡೆದುಕೊಂಡಿರುವ ಆಗುಂಬೆಯ ಸೌಂದರ್ಯವನ್ನು ನೋಡಲು ಎರಡು ಕಣ್ಣುಗಳು ಸಾಲದು. ಹೌದು.... ಹಚ್ಚ ಹಸಿರಿನಿಂದ ಕೂಡಿದ ಬೆಟ್ಟ ಗುಡ್ಡಗಳು,  ಈ ಆಗುಂಬೆ ಘಾಟಿನಲ್ಲಿ ಅಲ್ಲಿಲ್ಲಿ ಝುಳು ಝುಳು' ಎಂದು ಹರಿಯುವ ಝರಿಗಳೊಂದಿಗೆ ಆಗುಂಬೆಯು ಪ್ರಕೃತಿಯ ಸೊಬಗನ್ನು ಮೈಗೂಡಿಸಿಕೊಂಡಿರುವ ತಾಣವಾಗಿದ್ದು, ವರ್ಷಪೂರ್ತಿ ಸಾವಿರಾರು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಈಗ ಹೇಳಿ ಕೇಳಿ ಮಳೆಗಾಲ ಆರಂಭವಾಗಿದ್ದು, ಮಳೆಗಾಲದಲ್ಲಿ ಈ ಪ್ರದೇಶವು ಸಂಪೂರ್ಣ ಹಸಿರು ಹೊದಿಕೆಯನ್ನು ಧರಿಸಿ ಸ್ವರ್ಗದಂತೆಯೇ ಕಾಣುತ್ತಿದೆ. ಈ ಅದ್ಭತ ಸೌಂದರ್ಯವನ್ನು ಸವಿಯಲು ಪ್ರವಾಸಿಗರ ದಂಡೇ ಆಗುಂಬೆಗೆ ಹರಿದುಬರುತ್ತಿದೆ.

ಶಿವಮೊಗ್ಗ, (ಜುಲೈ 07): ಮಳೆಗಾಲ ಶುರುವಾಯ್ತು ಅಂದ್ರೆ ಸಾಕು ಕರ್ನಾಟಕದ “ಚಿರಾಪುಂಜಿ” ಎಂಬ ಪ್ರಸಿದ್ಧಿ ಪಡೆದುಕೊಂಡಿರುವ ಆಗುಂಬೆಯ ಸೌಂದರ್ಯವನ್ನು ನೋಡಲು ಎರಡು ಕಣ್ಣುಗಳು ಸಾಲದು. ಹೌದು…. ಹಚ್ಚ ಹಸಿರಿನಿಂದ ಕೂಡಿದ ಬೆಟ್ಟ ಗುಡ್ಡಗಳು,  ಈ ಆಗುಂಬೆ ಘಾಟಿನಲ್ಲಿ ಅಲ್ಲಿಲ್ಲಿ ಝುಳು ಝುಳು’ ಎಂದು ಹರಿಯುವ ಝರಿಗಳೊಂದಿಗೆ ಆಗುಂಬೆಯು ಪ್ರಕೃತಿಯ ಸೊಬಗನ್ನು ಮೈಗೂಡಿಸಿಕೊಂಡಿರುವ ತಾಣವಾಗಿದ್ದು, ವರ್ಷಪೂರ್ತಿ ಸಾವಿರಾರು ಪ್ರವಾಸಿಗರನ್ನು ತನ್ನತ್ತ ಸೆಳೆಯುತ್ತದೆ. ಈಗ ಹೇಳಿ ಕೇಳಿ ಮಳೆಗಾಲ ಆರಂಭವಾಗಿದ್ದು, ಮಳೆಗಾಲದಲ್ಲಿ ಈ ಪ್ರದೇಶವು ಸಂಪೂರ್ಣ ಹಸಿರು ಹೊದಿಕೆಯನ್ನು ಧರಿಸಿ ಸ್ವರ್ಗದಂತೆಯೇ ಕಾಣುತ್ತಿದೆ. ಈ ಅದ್ಭತ ಸೌಂದರ್ಯವನ್ನು ಸವಿಯಲು ಪ್ರವಾಸಿಗರ ದಂಡೇ ಆಗುಂಬೆಗೆ ಹರಿದುಬರುತ್ತಿದೆ.

ಕರ್ನಾಟಕ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More