ಗುಲ್ಮಾರ್ಗ್‌ನಲ್ಲಿ ಆಕಾಶದ ಮಧ್ಯೆ ಸಿಲುಕಿದ 300 ಪ್ರವಾಸಿಗರು!
ಜಮ್ಮು ಮತ್ತು ಕಾಶ್ಮೀರದ ಜನಪ್ರಿಯ ಪ್ರವಾಸಿ ತಾಣವಾದ ಗುಲ್ಮಾರ್ಗ್‌ನಲ್ಲಿರುವ ಗೊಂಡೊಲಾ ಕೇಬಲ್ ಕಾರ್ ಸೇವೆಯಲ್ಲಿ ತಾಂತ್ರಿಕ ದೋಷ ಸಂಭವಿಸಿದೆ. ಆದರೆ, ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಇದರಿಂದಾಗಿ ಸುಮಾರು 300 ಪ್ರವಾಸಿಗರು ಕೇಬಲ್ ಕಾರ್ಗಳಲ್ಲಿ ಸಿಲುಕಿದರು. ತಾಂತ್ರಿಕ ಸಮಸ್ಯೆಯಿಂದಾಗಿ ಗೊಂಡೊಲಾ ಸೇವೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕಾಯಿತು. ಮಾಹಿತಿ ತಿಳಿದ ಕೂಡಲೇ, ಸೇನೆಯ 9 ನೇ ರಾಜ್ ರೈಫಲ್ಸ್, ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ನಾಗರಿಕ ಆಡಳಿತದ ಜಂಟಿ ರಕ್ಷಣಾ ತಂಡವು ಸ್ಥಳಕ್ಕೆ ಆಗಮಿಸಿ ಬೃಹತ್ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿತು.
ಶ್ರೀನಗರ, ಮೇ 25: ಇಂದು ಜಮ್ಮು ಮತ್ತು ಕಾಶ್ಮೀರದ (Jammu and Kashmir) ಜನಪ್ರಿಯ ಪ್ರವಾಸಿ ತಾಣವಾದ ಗುಲ್ಮಾರ್ಗ್‌ನಲ್ಲಿರುವ ಗೊಂಡೊಲಾ ಕೇಬಲ್ ಕಾರ್ ಸೇವೆಯಲ್ಲಿ ತಾಂತ್ರಿಕ ದೋಷ ಸಂಭವಿಸಿದೆ. ಆದರೆ, ತಕ್ಷಣ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ. ಇದರಿಂದಾಗಿ ಸುಮಾರು 300 ಪ್ರವಾಸಿಗರು ಕೇಬಲ್ ಕಾರ್ಗಳಲ್ಲಿ ಸಿಲುಕಿದರು. ತಾಂತ್ರಿಕ ಸಮಸ್ಯೆಯಿಂದಾಗಿ ಗೊಂಡೊಲಾ ಸೇವೆಯನ್ನು ತಕ್ಷಣವೇ ಸ್ಥಗಿತಗೊಳಿಸಬೇಕಾಯಿತು.
ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos


