ಯಶ್ ಮಾಡಿದ ಸಹಾಯ ನೆನದ ಟೊವಿನೋ ಥಾಮಸ್

Edited By:

Updated on: Apr 08, 2026 | 8:36 AM

ಮಲಯಾಳಂ ಹಾಗೂ ಕನ್ನಡ ಚಿತ್ರರಂಗದ ಮಧ್ಯೆ ಸಾಕಷ್ಟು ಸಾಮ್ಯತೆ ಇದೆ. ಈ ಎರಡೂ ಸಿನಿಮಾ ರಂಗ ಒಂದೇ ರೀತಿಯಲ್ಲಿ ಇದೆ. ಈಗ ಪಳ್ಳಿ ಚಟ್ಟಂಬಿ ಚಿತ್ರದಲ್ಲಿ ಟೊವಿನೋ ಥಾಮಸ್ ಅವರು ನಟಿಸಿದ್ದಾರೆ. ಈ ಸಿನಿಮಾ ಬಗ್ಗೆ ಟೊವಿನೋ ಮಾತನಾಡಿದ್ದಾರೆ. ಈ ವೇಳೆ ಯಶ್ ಗೆಳೆತನ ನೆನೆದಿದ್ದಾರೆ.

ಟೊವಿನೋ ಥಾಮಸ್ ಅವರು ‘ಪಳ್ಳಿ ಚಟ್ಟಂಬಿ’ ಹೆಸರಿನ ಸಿನಿಮಾ ಮಾಡಿದ್ದಾರೆ. ಈ ಚಿತ್ರದ ಪ್ರಚಾರಕ್ಕಾಗಿ ತಂಡ ಬೆಂಗಳೂರಿಗೆ ಬಂದಿತ್ತು. ಈ ವೇಳೆ ಟಿವಿ9 ಕನ್ನಡದ ಜೊತೆ ಮಾತನಾಡಿದರು. ಆ ಸಂದರ್ಭದಲ್ಲಿ ಅವರು ಹಲವು ವಿಷಯಗಳಿಗೆ ಸ್ಪಷ್ಟನೆ ನೀಡಿದ್ದಾರೆ. ‘ಟಾಕ್ಸಿಕ್’ ಹಾಗೂ ‘ಡ್ರ್ಯಾಗನ್’ ಸಿನಿಮಾದ ಭಾಗವಾಗುತ್ತಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ ಯಶ್ ಮಾಡಿದ ಸಹಾಯ ನೆನೆದಿದ್ದಾರೆ. ‘ಮಿನ್ನಲ್ ಮುರಳಿ’ ಸಿನಿಮಾದ ಟೀಸರ್​​ನ ಯಶ್ ರಿಲೀಸ್ ಮಾಡಿದ್ದರು. ಕೋರಿಕೆ ಇಟ್ಟ ತಕ್ಷಣ ಅವರು ಒಪ್ಪಿಕೊಂಡಿದ್ದರು ಎಂದಿದ್ದರು ಟೊವಿನೋ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Loading...
Unable to load recommendations.
Follow Us
ಮಂಗಳ ರಾಜ್

ಮಂಗಳ ರಾಜ್ ಮೂಲತಃ ಮಧುಗಿರಿ ಬಳಿಯ ರತ್ನಗಿರಿ ರಂಗಾಪುರದವರು. ಇವರು ಸುದ್ದಿ ಮಧ್ಯಮಕ್ಕೆ ಕಾಲಿಟ್ಟು 13 ವರ್ಷಗಳಾಗಿವೆ. ಈಟಿವಿಯಲ್ಲಿ ಇಂಟರ್​ನ್​ಶಿಪ್​ , ಮಧ್ಯಮದ ಅ, ಆ ಇ ಈ ಕಲಿತಿದ್ದು ಕಸ್ತೂರಿ ನ್ಯೂಸ್ 24 ನಲ್ಲಿ ನಂತ್ರ ರಾಜ್ ನ್ಯೂಸ್, ದಿಗ್ವಿಜಯ ನ್ಯೂಸ್ ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. 2021ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮುಂದುವರಿಸಿದ್ದಾರೆ. ಸಿನಿಮಾ ಅಂದ್ರೆ ಬಾಲ್ಯದಿಂದಲೂ ಹುಚ್ಚು. ಅರಸಿ ಬಂದಿದ್ದು ಸಿನಿಮಾ ಜರ್ನಲಿಸ್ಟ್ ಕೆಲಸ. ಸಿನಿಮಾ ಸುದ್ದಿಗಳ ಕವರೇಜ್, ಸಿನಿಮಾ ಹಾಗೂ ಸಿನಿಮಾ ಮಂದಿಯ ವಿವಾದಗಳು, ವಿಮರ್ಶೆ, ಸಿನಿಮಾದವರ ಸಾವು ನೋವು ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ಇವುಗಳ ವರದಿಗಾರಿಕೆ ಇವರ ಕಾಯಕ. ಸಿನಿಮಾ ನೋಡುವುದೇ ಎಲ್ಲಾ ಆಸಕ್ತಿಗಳಿಗಿಂತ ಹೆಚ್ಚು ಆಸಕ್ತಿ.

Read More