ಕೂಲ್ ಡ್ರಿಂಕ್ಸ್​​ನಲ್ಲಿ ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕೊಡಿಸುವ ಮುನ್ನ ಎಚ್ಚರ

Updated on: Mar 05, 2026 | 3:48 PM

ಮಕ್ಕಳಿಗೆ ಕೂಲ್ ಡ್ರಿಂಕ್ಸ್ ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಶಾಲಾ ಕಾಲೇಜಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಬಂದಂತಹ ವರದಿಯನ್ನು ಆಧರಿಸಿಕೊಂಡು ಮಕ್ಕಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ.

ಬೆಂಗಳೂರು,ಮಾರ್ಚ್,5): ಮಕ್ಕಳಿಗೆ ಕೂಲ್ ಡ್ರಿಂಕ್ಸ್  ಕೊಡುವ ಮೊದಲು ಎಚ್ಚರ ವಹಿಸಬೇಕು. ಹೌದು.. ಇದೀಗ ತಂಪುಪಾನೀಯದಲ್ಲಿ (Soft Drinks) ವಿಷಕಾರಿ ಅಂಶ ಪತ್ತೆಯಾಗಿದೆ. ಈ ಸಂಬಂಧ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಹೌದು.. ಜ್ಯೂಸ್ ಮಾದರಿಯ ‘Buzz Ballz’ ತಂಪು ಪಾನೀಯದಲ್ಲಿ ವಿಷಕಾರಿ ಅಂಶ ಪತ್ತೆಯಾಗಿದೆ. ತಂಪು ಪಾನೀಯದಲ್ಲಿ ಅಧಿಕ ಸಕ್ಕರೆ ಮಟ್ಟ ಇದ್ದು, ಶೇಕಡ 15ರಷ್ಟು ಆಲ್ಕೋಹಾಲ್ ಅಂಶ ಇದೆ ಎಂದು ತಿಳಿದುಬಂದಿದೆ. ಟಿನ್ ರೂಪದಲ್ಲಿ ಈ ಒಂದು ಡ್ರಿಂಕ್ಸ್ ಮಾರುಕಟ್ಟೆಯಲ್ಲಿ ಮಾರಾಟವಾಗುತ್ತಿದೆ. ಶಾಲಾ ಕಾಲೇಜಿನ ಸುತ್ತಮುತ್ತಲಿನ ಪ್ರದೇಶದಲ್ಲಿ ಮಾರಾಟ ಮಾಡಲಾಗುತ್ತಿದೆ. ಈ ಸಂಬಂಧ ಸೋಶಿಯಲ್ ಮೀಡಿಯಾದಲ್ಲಿ ಬಂದಂತಹ ವರದಿಯನ್ನು ಆಧರಿಸಿಕೊಂಡು ಮಕ್ಕಳ ಆಯೋಗದಲ್ಲಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದೆ. ಅಲ್ಲದೇ ರಾಜ್ಯ ಮಕ್ಕಳ ಆಯೋಗವು ಔಷದ ನಿಯಂತ್ರಣ ಇಲಾಖೆಗೆ ಪತ್ರ ಬರೆದಿದ್ದು, ಮುಕ್ತವಾಗಿ ಮಾರಾಟ ಮಾಡಲು ಅವಕಾಶ ನೀಡಿದಂತೆ ತಿಳಿಸಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More