ಬೀದರ್‌ನಲ್ಲಿ ‘ಟಾಕ್ಸಿಕ್’ ಅಬ್ಬರ: ಥಿಯೇಟರ್ ಮುಂದೆ ರಾರಾಜಿಸುತ್ತಿದೆ ರಾಕಿ ಭಾಯ್ ಕಟೌಟ್‌ಗಳು!
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಟಾಕ್ಸಿಕ್ ಚಿತ್ರವು ವಿಶ್ವಾದ್ಯಂತ 12,000ಕ್ಕೂ ಹೆಚ್ಚು ಸ್ಕ್ರೀನ್‌ಗಳಲ್ಲಿ ಅದ್ಧೂರಿಯಾಗಿ ಬಿಡುಗಡೆಯಾಗಿದೆ. ಕರ್ನಾಟಕದಲ್ಲಿ 1,500ಕ್ಕೂ ಹೆಚ್ಚು ಥಿಯೇಟರ್‌ಗಳಲ್ಲಿ ಪ್ರದರ್ಶನ ಕಾಣುತ್ತಿದೆ. ನಾಲ್ಕು ವರ್ಷಗಳ ಬಳಿಕ ಯಶ್‌ರನ್ನು ತೆರೆ ಮೇಲೆ ಕಾಣಲು ಅಭಿಮಾನಿಗಳು ಬೀದರ್ ಮತ್ತು ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪಟಾಕಿ ಸಿಡಿಸಿ, ಕಟೌಟ್‌ಗಳಿಗೆ ಹೂವಿನ ಹಾರ ಹಾಕಿ ಸಂಭ್ರಮಿಸಿದ್ದಾರೆ.
ಬೀದರ್, ಆಗಸ್ಟ್ 26: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘ಟಾಕ್ಸಿಕ್’ ಸಿನಿಮಾ ಇಂದು ವಿಶ್ವಾದ್ಯಂತ ಅದ್ಧೂರಿಯಾಗಿ ತೆರೆಕಂಡಿದ್ದು, ಬೀದರ್‌ನಲ್ಲಿ ಅಭಿಮಾನಿಗಳ ಸಂಭ್ರಮ ಮುಗಿಲು ಮುಟ್ಟಿದೆ. ನಗರದ ಸ್ವಪ್ನಾ ಮಲ್ಟಿಪ್ಲೆಕ್ಸ್‌ನಲ್ಲಿ ಬೆಳ್ಳಂಬೆಳಿಗ್ಗೆ 6:45ಕ್ಕೇ ಮೊದಲ ಪ್ರದರ್ಶನ ಆರಂಭಗೊಂಡಿದ್ದು, ಯಶ್ ಅಭಿಮಾನಿಗಳು ಸಾಲಾಗಿ ನಿಂತು ಚಿತ್ರ ವೀಕ್ಷಿಸಿದರು. ಚಿತ್ರಮಂದಿರದ ಮುಂದೆ ರಾಕಿ ಭಾಯ್ ಅವರ ಬೃಹತ್ ಕಟೌಟ್‌ಗಳು ರಾರಾಜಿಸುತ್ತಿದ್ದು, ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸಿದ ಅಭಿಮಾನಿಗಳು ಹಬ್ಬದ ವಾತಾವರಣ ಸೃಷ್ಟಿಸಿದ್ದಾರೆ. 4 ವರ್ಷಗಳ ಸುದೀರ್ಘ ಕಾಯುವಿಕೆಯ ನಂತರ ತಮ್ಮ ನೆಚ್ಚಿನ ನಟನನ್ನು ಬೆಳ್ಳಿಪರದೆಯ ಮೇಲೆ ಕಣ್ತುಂಬಿಕೊಂಡ ಯಶ್ ಫ್ಯಾನ್ಸ್ ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ.
ಟಾಕ್ಸಿಕ್ ಸಿನಿಮಾ ರಿಲೀಸ್ ಲೈವ್ ಅಪ್ಡೇಟ್ಸ್ಗೆ ಇಲ್ಲಿ ಕ್ಲಿಕ್ ಮಾಡಿ
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

