Video: ಕಾರು ಓಡಿಸುವಾಗ ವ್ಯಕ್ತಿಗೆ ಹೃದಯಾಘಾತ, ಸಿಪಿಆರ್ ನೀಡಿ ಜೀವ ಉಳಿಸಿದ ಟ್ರಾಫಿಕ್ ಪೊಲೀಸ್

Updated on: Mar 11, 2026 | 1:28 PM

ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.

ಹೈದರಾಬಾದ್, ಮಾರ್ಚ್​ 11: ಕಾರು ಓಡಿಸುವಾಗ ವ್ಯಕ್ತಿಯೊಬ್ಬರಿಗೆ ಹಠಾತ್ ಹೃದಯಾಘಾತವಾಗಿದ್ದು, ಅಲ್ಲೇ ಇದ್ದ ಟ್ರಾಫಿಕ್ ಪೊಲೀಸ್ ಕೂಡಲೇ ಸಿಪಿಆರ್ ನೀಡಿ ಪ್ರಾಣ ಉಳಿಸಿರುವ ಘಟನೆ ಹೈದರಾಬಾದ್​ನ ಸಿಕಂದರಾಬಾದಿನಲ್ಲಿ ನಡೆದಿದೆ. ಸಂಗೀತ್ ಕ್ರಾಸ್‌ರೋಡ್ಸ್‌ನಲ್ಲಿರುವ ಇಸ್ಕಾನ್ ದೇವಾಲಯದ ಬಳಿ, ವೃದ್ಧರೊಬ್ಬರಿಗೆ ಕಾರು ಚಾಲನೆ ಮಾಡುವಾಗ ಎದೆನೋವು ಕಾಣಿಸಿಕೊಂಡಿತ್ತು.ಇದರಿಂದಾಗಿ ಕಾರು ನಿಯಂತ್ರಣ ತಪ್ಪಿ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಸ್ಥಳದಲ್ಲಿದ್ದ ಸಂಚಾರಿ ಕಾನ್‌ಸ್ಟೆಬಲ್ ಪರಿಸ್ಥಿತಿಯನ್ನು ಅರ್ಥಮಾಡಿಕೊಂಡು, ತಕ್ಷಣವೇ ಕಾರಿನ ಬಾಗಿಲುಗಳನ್ನು ತೆರೆದು ಪ್ರಜ್ಞೆ ತಪ್ಪಿದ ವೃದ್ಧನನ್ನು ಆಸ್ಪತ್ರೆಗೆ ಸಾಗಿಸುವ ಮೊದಲು ಸಿಪಿಆರ್ ನೀಡುವ ಮೂಲಕ ಜೀವ ಉಳಿಸಿದ್ದಾರೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More