ಬೆಂಗಳೂರಿನಲ್ಲಿ ಅಬ್ಬರಿಸಿದ ಮಳೆರಾಯ: ರಸ್ತೆಗಳೆಲ್ಲಾ ಜಲಾವೃತ,ವಾಹನ ಸವಾರರು ಪರದಾಟ
ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರದಿದ್ದು, ಹಲವು ಕಡೆ ಮಂಗಳವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಹೌದು...ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿದಿದೆ. ನಗರದ ಕೇಂದ್ರ ಹಾಗೂ ಉತ್ತರ ಭಾಗಗಳಾದ ಮೆಜೆಸ್ಟಿಕ್, ಎಂ.ಜಿ. ರಸ್ತೆ, ವಿಧಾನಸೌಧ, ಮಲ್ಲೇಶ್ವರ ಮತ್ತು ಹೆಬ್ಬಾಳ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಕಂಡುಬಂತು. ಇದರಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಚೇರಿಗಳಿಂದ ಮನೆಗೆ ಮರಳುತ್ತಿದ್ದ ಸವಾರರು ಟ್ರಾಫಿಕ್ ಜಾಮ್‌ನಿಂದಾಗಿ ತೀವ್ರ ಪರದಾಟ ಅನುಭವಿಸಿದರು.
ಬೆಂಗಳೂರು, (ಸೆಪ್ಟೆಂಬರ್ 15): ಬಿಸಿಲಿನ ಧಗೆಯಿಂದ ಕಂಗೆಟ್ಟಿದ್ದ ರಾಜಧಾನಿ ಬೆಂಗಳೂರಿನ ಜನತೆಗೆ ಮಳೆರಾಯ ತಂಪೆರದಿದ್ದು, ಹಲವು ಕಡೆ ಮಂಗಳವಾರ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಹೌದು…ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಒಂದು ಗಂಟೆಗೂ ಹೆಚ್ಚು ಕಾಲ ಬಿರುಸಿನ ಮಳೆ ಸುರಿದಿದೆ. ನಗರದ ಕೇಂದ್ರ ಹಾಗೂ ಉತ್ತರ ಭಾಗಗಳಾದ ಮೆಜೆಸ್ಟಿಕ್, ಎಂ.ಜಿ. ರಸ್ತೆ, ವಿಧಾನಸೌಧ, ಮಲ್ಲೇಶ್ವರ ಮತ್ತು ಹೆಬ್ಬಾಳ ಸೇರಿದಂತೆ ಹಲವೆಡೆ ಮಳೆಯ ಅಬ್ಬರ ಕಂಡುಬಂತು. ಇದರಿಂದಾಗಿ ರಸ್ತೆಗಳು ಜಲಾವೃತಗೊಂಡು ವಾಹನ ಸಂಚಾರ ಅಸ್ತವ್ಯಸ್ತಗೊಂಡಿತು. ಕಚೇರಿಗಳಿಂದ ಮನೆಗೆ ಮರಳುತ್ತಿದ್ದ ಸವಾರರು ಟ್ರಾಫಿಕ್ ಜಾಮ್‌ನಿಂದಾಗಿ ತೀವ್ರ ಪರದಾಟ ಅನುಭವಿಸಿದರು.
ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ
Loading...
Unable to load recommendations.
Follow Us
