ಸೆಕೆಯಿಂದ ಕಂಗೆಟ್ಟಿದ್ದ ಬೆಂಗಳೂರಿಗರು ಕೂಲ್ ಕೂಲ್…ಮಳೆ ಅಬ್ಬರ ಹೇಗಿತ್ತು ನೋಡಿ

Updated on: Apr 30, 2025 | 5:30 PM

ಬಿಸಿ ಬಿಸಿ ಗಾಳಿ, ಸೆಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್​ ಸಿಟಿ ಬೆಂಗಳೂರಿಗರಿಗೆ ಮಳೆರಾಯ ತಂಪೆರದಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 30) ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಇದೀಗ ಬೆಂಗಳೂರಿನಲ್ಲಿ ಇಂದು ಸಂಜೆ ಗಾಳಿ ಸಹಿತ ಮಳೆಯಾಗುತ್ತಿದೆ.

ಬೆಂಗಳೂರು, (ಏಪ್ರಿಲ್ 30): ಬಿಸಿ ಬಿಸಿ ಗಾಳಿ, ಸೆಕೆಯಿಂದ ಕಂಗೆಟ್ಟಿದ್ದ ಸಿಲಿಕಾನ್​ ಸಿಟಿ ಬೆಂಗಳೂರಿಗರಿಗೆ ಮಳೆರಾಯ ತಂಪೆರದಿದ್ದಾನೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದು (ಏಪ್ರಿಲ್ 30) ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಇದೀಗ ಬೆಂಗಳೂರಿನಲ್ಲಿ ಇಂದು ಸಂಜೆ ಗಾಳಿ ಸಹಿತ ಮಳೆಯಾಗುತ್ತಿದೆ. ಈ ದಿಢೀರ್ ಮಳೆಯಿಂದ ಕೆಲವೆಡೆ ರಸ್ತೆಯಲ್ಲಿ ನೀರು ನಿಂತಿದ್ದು, ವಾಹನ ಸವಾರರ ಪರದಾಟವಂತಾಗಿದೆ. ಅಲ್ಲದೇ ಮಳೆ ಹಿನ್ನೆಲೆಯಲ್ಲಿ ಹಲವೆಡೆ ಟ್ರಾಫಿಕ್ ಜಾಮ್​ ಕೂಡ ಉಂಟಾಗಿದೆ.

Published on: Apr 30, 2025 04:54 PM
Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More