AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ ಬೆಳಗಾವಿಯ ಪಿಯು ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

ಅಕ್ಷಯ್​ ಪಲ್ಲಮಜಲು​​
|

Updated on:Feb 28, 2026 | 10:58 PM

Share

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ಮೊದಲ ದಿನವೇ 17 ವರ್ಷದ ವಿದ್ಯಾರ್ಥಿನಿ ಭೂಮಿಕಾ ಮಾಳಂಗಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದಾಗ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮುನ್ನವೇ ಮೃತಪಟ್ಟಿದ್ದು, ಪೋಷಕರು ಮತ್ತು ಗ್ರಾಮಸ್ಥರಲ್ಲಿ ಆಘಾತ ಮೂಡಿಸಿದೆ. ಯುವಜನರಲ್ಲಿ ಹೆಚ್ಚುತ್ತಿರುವ ಹೃದಯಾಘಾತ ಪ್ರಕರಣಗಳ ಬಗ್ಗೆ ಆತಂಕ ಹೆಚ್ಚಿದೆ.

ಬೆಳಗಾವಿ, ಫೆ.28: ದ್ವಿತೀಯ ಪಿಯುಸಿ ಪರೀಕ್ಷೆಯ ಮೊದಲ ದಿನವೇ ಜಿಲ್ಲೆಯಲ್ಲಿ ಕರುಳು ಹಿಂಡುವ ಘಟನೆಯೊಂದು ನಡೆದಿದೆ. ಪರೀಕ್ಷೆಗೆ ಸಿದ್ಧತೆ ನಡೆಸುತ್ತಿದ್ದ 17 ವರ್ಷದ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ್ದಾಳೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬಂಬಲವಾಡ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಭೂಮಿಕಾ ಮಾಳಂಗಿ (17) ಮೃತ ವಿದ್ಯಾರ್ಥಿನಿ ಎಂದು ಹೇಳಲಾಗಿದೆ. ಇಂದು ದ್ವಿತೀಯ ಪಿಯು ಪರೀಕ್ಷೆಯ ಮೊದಲ ದಿನ. ಭೂಮಿಕಾ ಅವರು ಉತ್ಸಾಹದಿಂದ ಪರೀಕ್ಷೆ ಬರೆಯಲು ಸಿದ್ಧತೆ ಮಾಡಿಕೊಳ್ಳುತ್ತಿದ್ದರು. ಸ್ನಾನ ಮುಗಿಸಿ ಹೊರಬರುವಾಗ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಗಾಬರಿಗೊಂಡ ಪೋಷಕರು ತಕ್ಷಣವೇ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲು ಮುಂದಾದರು. ಆದರೆ, ದುರದೃಷ್ಟವಶಾತ್ ಆಸ್ಪತ್ರೆಗೆ ತಲುಪುವ ಮೊದಲೇ ಮಾರ್ಗಮಧ್ಯೆ ಭೂಮಿಕಾ ಮೃತಪಟ್ಟಿದ್ದಾಳೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

 

Published on: Feb 28, 2026 10:57 PM
Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More