Bihar Stampede: ಬಿಹಾರದ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ, 8 ಮಹಿಳೆಯರು ಸಾವು

Updated on: Mar 31, 2026 | 11:51 AM

ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಚೈತ್ರ ಮಾಸದ ಕೊನೆಯ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು ಉಸಿರು ಚೆಲ್ಲಿದ್ದರು.

ಪಾಟ್ನಾ, ಮಾರ್ಚ್​ 31: ಬಿಹಾರದ ನಳಂದದಲ್ಲಿರುವ ಶೀತಲ ದೇವಸ್ಥಾನದಲ್ಲಿ ಕಾಲ್ತುಳಿತ ಉಂಟಾಗಿದ್ದು, 8 ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. 6ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.ಚೈತ್ರ ಮಾಸದ ಕೊನೆಯ ಮಂಗಳವಾರದಂದು ಹೆಚ್ಚಿನ ಸಂಖ್ಯೆಯ ಭಕ್ತರು ಆಗಮಿಸಿದ್ದರು. ಅಪಘಾತದಿಂದ ಮಹಿಳೆಯರು ಸೇರಿದಂತೆ ಅನೇಕ ಜನರು ತೊಂದರೆಗೀಡಾಗಿದ್ದಾರೆ. ದುರಂತದ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ, ಗ್ರಾಮಸ್ಥರೊಂದಿಗೆ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಬಂದು ರಕ್ಷಣಾ ಕಾರ್ಯ ನಡೆಸಿದರು. ಕಳೆದ ವರ್ಷ, ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಏಕಾದಶಿಯಂದು ಕಾಲ್ತುಳಿತ ಉಂಟಾಗಿ 9 ಮಂದಿ ಭಕ್ತರು ಉಸಿರು ಚೆಲ್ಲಿದ್ದರು.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More