Video: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ, ಮೂವರು ಸಾವು, ಹಲವರಿಗೆ ಗಾಯ
Jagannath Rath Yatra Stampede: ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜಗನ್ನಾಥ, ಬಲಭದ್ರ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಯಾತ್ರೆ ಪ್ರಾರಂಭವಾಗಿವೆ. ಜಗನ್ನಾಥ ದೇವಸ್ಥಾನದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಇದ್ದಾಗ ಈ ಘಟನೆ ಸಂಭವಿಸಿದೆ.
ಪುರಿ, ಜೂನ್ 29: ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ ಉಂಟಾಗಿದ್ದು, ಮೂವರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. 30ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಜಗನ್ನಾಥ, ಬಲಭದ್ರ ಮತ್ತು ಸುಭದ್ರ ದೇವಿಯ ವಿಗ್ರಹಗಳನ್ನು ಹೊತ್ತ ಮೂರು ರಥಗಳು ಯಾತ್ರೆ ಪ್ರಾರಂಭವಾಗಿವೆ. ಜಗನ್ನಾಥ ದೇವಸ್ಥಾನದಿಂದ ಸುಮಾರು ಮೂರು ಕಿಲೋಮೀಟರ್ ದೂರದಲ್ಲಿರುವ ಶ್ರೀ ಗುಂಡಿಚಾ ದೇವಸ್ಥಾನದ ಬಳಿ ಇದ್ದಾಗ ಈ ಘಟನೆ ಸಂಭವಿಸಿದೆ.
ಇಂದು ಬೆಳಗಿನ ಜಾವ 4.30 ರ ಸುಮಾರಿಗೆ ಪವಿತ್ರ ರಥಗಳು ಗುಂಡಿಚಾ ದೇವಸ್ಥಾನದಲ್ಲಿ ಇದ್ದವು ಮತ್ತು ದರ್ಶನಕ್ಕಾಗಿ ದೊಡ್ಡ ಜನಸಮೂಹ ಜಮಾಯಿಸಿತ್ತು.ಜನಸಂದಣಿ ಹೆಚ್ಚಾಗುತ್ತಿದ್ದಂತೆ, ಕೆಲವರು ಬಿದ್ದು ಕಾಲ್ತುಳಿತ ಪ್ರಾರಂಭವಾಯಿತು. ಮೂವರು ಸ್ಥಳದಲ್ಲೇ ಸಾವನ್ನಪ್ಪಿದರು. ಇವರಲ್ಲಿ ಇಬ್ಬರು ಮಹಿಳೆಯರು, ಪ್ರಭಾತಿ ದಾಸ್ ಮತ್ತು ಬಸಂತಿ ಸಾಹು ಮತ್ತು 70 ವರ್ಷದ ಪ್ರೇಮಕಾಂತ್ ಮೊಹಂತಿ ಸೇರಿದ್ದಾರೆ.
ಮೂವರೂ ಖುರ್ದಾ ಜಿಲ್ಲೆಯವರಾಗಿದ್ದು, ರಥಯಾತ್ರೆಗಾಗಿ ಪುರಿಗೆ ಬಂದಿದ್ದರು ಎಂದು ತಿಳಿದುಬಂದಿದೆ. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಪರೀಕ್ಷೆಯಿಂದ ಸಾವಿಗೆ ನಿಖರವಾದ ಕಾರಣ ತಿಳಿದುಬರುತ್ತದೆ ಎಂದು ಪುರಿ ಜಿಲ್ಲಾಧಿಕಾರಿ ಸಿದ್ಧಾರ್ಥ್ ಶಂಕರ್ ಸ್ವೈನ್ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ