ಮಹಾಕುಂಭ ಮೇಳದಲ್ಲಿ ಅನಾಹುತ ಸಂಭವಿಸಿದೆ, ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ: ಪ್ರಿಯಾಂಕಾ ಜಾರಕಿಹೊಳಿ
ದುರಂತದಲ್ಲಿ ಸತ್ತವರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ವೈಯಕ್ತಿಕವಾಗಿ ನೀಡುವ ಘೋಷಣೆಯನ್ನು ತಮ್ಮ ತಂದೆ ಸತೀಶ್ ಜಾರಕಿಹೊಳಿಯವರು ಮಾಡಿದ್ದಾರೆ, ರಾಜ್ಯ ಸರ್ಕಾರ ಇದುವರೆಗೆ ಪರಿಹಾರಕ್ಕೆ ಸಂಬಂಧಿಸಿದಂತೆ ಇನ್ನೂ ಯಾವುದೇ ಘೋಷಣೆಯನ್ನು ಮಾಡಿಲ್ಲ, ತಾವು ಮುಖ್ಯಮಂತ್ರಿಯವರ ನಿರ್ದೇಶನಕ್ಕಾಗಿ ಕಾಯುತ್ತಿರುವುದಾಗಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.
ಬೆಳಗಾವಿ: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ಚಿಕ್ಕೋಡಿಯ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಬೆಳಗಾವಿಯ ನಾಲ್ವರು ಭಕ್ತಾದಿಗಳು ಮರಣಿಸಿರುವುದಕ್ಕೆ ಶೋಕ ವ್ಯಕ್ತಪಡಿಸಿದರು. ವಿಮಾನದಲ್ಲಿ ಆಗಮಿಸಿದ ಪಾರ್ಥೀವ ಶರೀರಗಳನ್ನು ರಿಸೀವ್ ಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿದ್ದ ಸಂಸದೆಯು, ಅನಾಹುತ ನಡೆದು ಹೋಗಿದೆ, ಯಾರೇನೂ ಮಾಡಲಾಗಲ್ಲ, ಸತ್ತವರ ಕುಟುಂಬಗಳು ಸಹ ವಿಮಾನ ನಿಲ್ದಾಣಕ್ಕೆ ಬಂದಿವೆ, ಈ ಕುಟುಂಬಗಳಿಗೆ ನೋವು ಮತ್ತು ದುಃಖ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಹೇಳಿದರು.
ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ
Published on: Jan 30, 2025 08:34 PM