ಮಹಾಕುಂಭ ಮೇಳದಲ್ಲಿ ಅನಾಹುತ ಸಂಭವಿಸಿದೆ, ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ: ಪ್ರಿಯಾಂಕಾ ಜಾರಕಿಹೊಳಿ

Updated on: Jan 30, 2025 | 8:49 PM

ದುರಂತದಲ್ಲಿ ಸತ್ತವರ ಕುಟುಂಬಗಳಿಗೆ ತಲಾ ರೂ. 2 ಲಕ್ಷ ವೈಯಕ್ತಿಕವಾಗಿ ನೀಡುವ ಘೋಷಣೆಯನ್ನು ತಮ್ಮ ತಂದೆ ಸತೀಶ್ ಜಾರಕಿಹೊಳಿಯವರು ಮಾಡಿದ್ದಾರೆ, ರಾಜ್ಯ ಸರ್ಕಾರ ಇದುವರೆಗೆ ಪರಿಹಾರಕ್ಕೆ ಸಂಬಂಧಿಸಿದಂತೆ ಇನ್ನೂ ಯಾವುದೇ ಘೋಷಣೆಯನ್ನು ಮಾಡಿಲ್ಲ, ತಾವು ಮುಖ್ಯಮಂತ್ರಿಯವರ ನಿರ್ದೇಶನಕ್ಕಾಗಿ ಕಾಯುತ್ತಿರುವುದಾಗಿ ಪ್ರಿಯಾಂಕಾ ಜಾರಕಿಹೊಳಿ ಹೇಳಿದರು.

ಬೆಳಗಾವಿ: ನಗರದಲ್ಲಿಂದು ಮಾಧ್ಯಮಗಳ ಜೊತೆ ಮಾತಾಡಿದ ಚಿಕ್ಕೋಡಿಯ ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಉತ್ತರ ಪ್ರದೇಶದ ಪ್ರಯಾಗ್​ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಸಂಭವಿಸಿದ ಕಾಲ್ತುಳಿತದ ಘಟನೆಯಲ್ಲಿ ಬೆಳಗಾವಿಯ ನಾಲ್ವರು ಭಕ್ತಾದಿಗಳು ಮರಣಿಸಿರುವುದಕ್ಕೆ ಶೋಕ ವ್ಯಕ್ತಪಡಿಸಿದರು. ವಿಮಾನದಲ್ಲಿ ಆಗಮಿಸಿದ ಪಾರ್ಥೀವ ಶರೀರಗಳನ್ನು ರಿಸೀವ್ ಮಾಡಿಕೊಳ್ಳಲು ವಿಮಾನ ನಿಲ್ದಾಣದಲ್ಲಿದ್ದ ಸಂಸದೆಯು, ಅನಾಹುತ ನಡೆದು ಹೋಗಿದೆ, ಯಾರೇನೂ ಮಾಡಲಾಗಲ್ಲ, ಸತ್ತವರ ಕುಟುಂಬಗಳು ಸಹ ವಿಮಾನ ನಿಲ್ದಾಣಕ್ಕೆ ಬಂದಿವೆ, ಈ ಕುಟುಂಬಗಳಿಗೆ ನೋವು ಮತ್ತು ದುಃಖ ಭರಿಸುವ ಶಕ್ತಿಯನ್ನು ಭಗವಂತ ದಯಪಾಲಿಸಲಿ ಎಂದು ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: ಮಹಾಕುಂಭ ಮೇಳದಲ್ಲಿ ಉಂಟಾದ ಕಾಲ್ತುಳಿತದಲ್ಲಿ 30 ಭಕ್ತರು ಸಾವು, 60 ಜನರಿಗೆ ಗಾಯ

Published on: Jan 30, 2025 08:34 PM
Follow Us
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More