AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಟ್ವಾಳದಲ್ಲಿ ಹೃದಯವಿದ್ರಾವಕ ಘಟನೆ: ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

ಬಂಟ್ವಾಳದಲ್ಲಿ ಹೃದಯವಿದ್ರಾವಕ ಘಟನೆ: ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು

ಪೃಥ್ವಿರಾಜ್​ ಬಿ.ಯು. ಮಂಗಳೂರು
| Edited By: |

Updated on: Jul 22, 2026 | 9:09 PM

Share

ದಕ್ಷಿಣ ಕನ್ನಡ ಜಿಲ್ಲೆಯ ಬರಿಮಾರು ಬಳಿ ಶಾಲಾ ಬಸ್ ಮೇಲೆ ಮರ ಬಿದ್ದು ಐದು ವರ್ಷದ ಬಾಲಕಿ ಚಿರನ್ವಿ ಸಾವನ್ನಪ್ಪಿದ್ದಾಳೆ. ಕಲ್ಲಡ್ಕದ ಶ್ರೀರಾಮ ಶಾಲೆಯ ವಿದ್ಯಾರ್ಥಿನಿಯಾಗಿದ್ದ ಚಿರನ್ವಿ, ಶಾಲೆ ಮುಗಿಸಿ ಹಿಂದಿರುಗುವಾಗ ಈ ದುರ್ಘಟನೆ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಇನ್ನೂ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಂಗಳೂರು, ಜು.22: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿಯ ಬರಿಮಾರು ಸಮೀಪದ ಕಲ್ಲಡ್ಕ ಶ್ರೀರಾಮ ಶಾಲಾ ಬಸ್ ಮೇಲೆ ಮರ ಬಿದ್ದ ಪರಿಣಾಮ ಐದು ವರ್ಷದ ಬಾಲಕಿ ಚಿರನ್ವಿ ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಈ ದುರಂತದಲ್ಲಿ ಕಲ್ಲಡ್ಕದ ಶ್ರೀರಾಮ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದ ಐದು ವರ್ಷದ ಚಿರನ್ವಿ ಪ್ರಾಣ ಕಳೆದುಕೊಂಡಿದ್ದು, ಮತ್ತಿಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಶಾಲೆ ಮುಗಿಸಿಕೊಂಡು ಮಕ್ಕಳನ್ನು ಮನೆಗೆ ತಲುಪಿಸುತ್ತಿದ್ದ ಶಾಲಾ ವಾಹನದ ಮೇಲೆ ಆಕಸ್ಮಿಕವಾಗಿ ಬೃಹತ್ ಮರವೊಂದು ಬಿದ್ದಿದೆ. ಮರ ಬಿದ್ದ ತಕ್ಷಣವೇ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದು, ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲು ಕ್ರಮ ಕೈಗೊಳ್ಳಲಾಯಿತು. ಗಂಭೀರವಾಗಿ ಗಾಯಗೊಂಡಿದ್ದ ಚಿರನ್ವಿಯನ್ನು ಆಟೋದಲ್ಲಿ ಪುತ್ತೂರು ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಲಾಯಿತು. ಆದರೆ, ಆಸ್ಪತ್ರೆ ತಲುಪುವ ಮೊದಲೇ ಮಾರ್ಗ ಮಧ್ಯೆಯೇ ಚಿರನ್ವಿ ಕೊನೆಯುಸಿರೆಳೆದಿದ್ದಾಳೆ ಎಂದು ವೈದ್ಯರು ತಿಳಿಸಿದ್ದಾರೆ. ಈ ದುರಂತದಲ್ಲಿ ಗಾಯಗೊಂಡಿದ್ದ ಇತರ ಇಬ್ಬರು ಮಕ್ಕಳು ಪ್ರಸ್ತುತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಸ್ಥಿತಿ ಕೂಡ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಕೂಲಂಕಷ ಪರಿಶೀಲನೆ ನಡೆಸಿದ್ದಾರೆ. ಈ ಹೃದಯ ಕಲಕುವ ಘಟನೆ ಸ್ಥಳೀಯರಲ್ಲಿ ದುಃಖವನ್ನುಂಟು ಮಾಡಿದೆ.

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಪೃಥ್ವಿರಾಜ್​ ಬಿ.ಯು. ಮಂಗಳೂರು
ಪೃಥ್ವಿರಾಜ್​ ಬಿ.ಯು. ಮಂಗಳೂರು

ಬಿ.ಯು.ಪೃಥ್ವಿರಾಜ್. ಮೂಲತಹ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು. ಪತ್ರಿಕೋದ್ಯಮದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಮಾಡಿದ್ದೇನೆ. ವಿದ್ಯಬ್ಯಾಸ ಆದ ತಕ್ಷಣ ಟಿವಿ9 ಕರ್ನಾಟಕದ ಬೆಂಗಳೂರು ಕಚೇರಿಯಲ್ಲಿ ಜಾಯಿನ್ ಆದೆ. ಕಳೆದ 13 ವರ್ಷಗಳಿಂದ ಟಿವಿ9 ನಲ್ಲಿ ಕಾರ್ಯನಿರ್ವಹಿಸುತ್ತಿದ್ದ, ಚಾಮರಾಜನಗರ ಜಿಲ್ಲೆ, ಬೆಂಗಳೂರು ಕೇಂದ್ರ ಕಚೇರಿಯ ಕ್ರೈಂ ಬೀಟ್ ನಲ್ಲಿ ಕಾರ್ಯನಿರ್ವಹಿಸಿ 2016 ರಿಂದ ಮಂಗಳೂರು ಬ್ಯೂರೋದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ಹರಕೆ ಗೋವುಗಳು ಕಸಾಯಿಕಾನೆಗೆ ಹೋಗುತ್ತಿದ್ದ ಬಗ್ಗೆ ಸ್ಟಿಂಗ್ ಆಪರೇಷನ್ ಮಾಡಲು ತಮಿಳುನಾಡಿನಲ್ಲಿ ಕಾರ್ಯನಿರ್ವಹಿಸಿದ ಅನುಭವ. ಈ ಸ್ಟಿಂಗ್ ಆಪರೇಷನ್ ಸ್ಟೋರಿಗೆ ರಾಮನಾಥ ಗೋಯಾಂಕ ಪ್ರಶಸ್ತಿಗೆ ನಾಮಿನಿಯಾಗಿದ್ದೆ. ರಾಜಕೀಯ, ಪ್ರವಾಹ, ರಾಷ್ಟ್ರ ಮಟ್ಟದ ಅಪರಾಧ ಪ್ರಕರಣಗಳು, ಎನ್.ಐ.ಎ ತನಿಖೆಗಳು, ಭಯೋತ್ಪಾದಕ ಚಚುವಟಿಕೆಗಳು ಆದಾಗ ಅಲ್ಲಿ ವರದಿಗಾರಿಕೆ. ಮಂಗಳೂರು ಗೋಲಿಬಾರ್, ಬೆಂಗಳೂರು ಕರ್ಫ್ಯೂ, ಏರ್ಪೋರ್ಟ್ ನಲ್ಲಿ ಜೀವಂತ ಬಾಂಬ್ ಆಪರೇಷನ್ ಗಳಲ್ಲಿ ವರದಿ ಮಾಡಿದ ಅನುಭವ.

Read More