Video: ಕುರ್ಚಿ ಮೇಲೆ ಕುಳಿತು ನಿದ್ರೆಗೆ ಜಾರಿದ ವೈದ್ಯ, ರೋಗಿ ತೀವ್ರ ರಕ್ತಸ್ರಾವದಿಂದ ಸಾವು

Updated on: Jul 30, 2025 | 8:00 AM

ವೈದ್ಯರೊಬ್ಬರ ಬೇಜವಾಬ್ದಾರಿತನದಿಂದ ರೋಗಿ ಪ್ರಾಣ ಬಿಟ್ಟಿರುವ ಘಟನೆ ಮೀರತ್​​ನಲ್ಲಿ ನಡೆದಿದೆ. ಮೀರತ್‌ನ ಎಲ್‌ಎಲ್‌ಆರ್‌ಎಂ ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರೊಬ್ಬರ ನಿರ್ಲಕ್ಷ್ಯದಿಂದ ರೋಗಿಯ ಸಾವಾಗಿದೆ. ವೈದ್ಯರೊಬ್ಬರು ಕುರ್ಚಿಯ ಮೇಲೆ ಮಲಗಿ ನಿದ್ರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೇ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸ್ಟ್ರೆಚರ್ ಮೇಲೆ ಮಲಗಿದ್ದಾರೆ. ತುಂಬಾ ರಕ್ತಸ್ರಾವವಾಗುತ್ತಿತ್ತು

ಮೀರತ್​, ಜುಲೈ 30: ವೈದ್ಯೋ ನಾರಾಯಣೋ ಹರಿಃ ಅಂತಾರೆ, ದೇವರಂತೆ ಕಾಪಾಡಬೇಕಿದ್ದ ವೈದ್ಯರೇ ರೋಗಿ ಸಾವಿಗೆ ಕಾರಣರಾಗಿದ್ದಾರೆ. ವೈದ್ಯರೊಬ್ಬರ ಬೇಜವಾಬ್ದಾರಿತನದಿಂದ ರೋಗಿ ಪ್ರಾಣ ಬಿಟ್ಟಿರುವ ಘಟನೆ ಮೀರತ್​​ನಲ್ಲಿ ನಡೆದಿದೆ. ಮೀರತ್‌ನ ಎಲ್‌ಎಲ್‌ಆರ್‌ಎಂ ವೈದ್ಯಕೀಯ ಕಾಲೇಜಿನ ತುರ್ತು ಚಿಕಿತ್ಸಾ ವಿಭಾಗದಲ್ಲಿ ವೈದ್ಯರೊಬ್ಬರ ನಿರ್ಲಕ್ಷ್ಯದಿಂದ ರೋಗಿಯ ಸಾವಾಗಿದೆ. ವೈದ್ಯರೊಬ್ಬರು ಕುರ್ಚಿಯ ಮೇಲೆ ಮಲಗಿ ನಿದ್ರಿಸುತ್ತಿರುವುದನ್ನು ವಿಡಿಯೋದಲ್ಲಿ ಕಾಣಬಹುದು. ಅದೇ ಸಮಯದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸ್ಟ್ರೆಚರ್ ಮೇಲೆ ಮಲಗಿದ್ದಾರೆ. ತುಂಬಾ ರಕ್ತಸ್ರಾವವಾಗುತ್ತಿತ್ತು. ಆದರೆ ವೈದ್ಯರಿಗೆ ಎಚ್ಚರವೇ ಇರಲಿಲ್ಲ. ಗಾಯಾಳು ಚಿಕಿತ್ಸೆ ಸಿಗದೆ ಸಾವನ್ನಪ್ಪಿದ್ದಾರೆ ಎಂದು ರೋಗಿಯ ಕುಟುಂಬದವರು ಆರೋಪ ಮಾಡಿದ್ದಾರೆ. ಆಸ್ಪತ್ರೆಯಲ್ಲಿ ಕರ್ತವ್ಯದಲ್ಲಿದ್ದ ಇಬ್ಬರು ವೈದ್ಯರನ್ನು ಅಮಾನತುಗೊಳಿಸಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.

 

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More