AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Video: ಜಮ್ಮು-ಕಾಶ್ಮೀರದ ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, 10 ಸೈನಿಕರು ಸಾವು

Video: ಜಮ್ಮು-ಕಾಶ್ಮೀರದ ದೋಡಾದಲ್ಲಿ ಕಂದಕಕ್ಕೆ ಉರುಳಿದ ಸೇನಾ ವಾಹನ, 10 ಸೈನಿಕರು ಸಾವು

ನಯನಾ ರಾಜೀವ್
|

Updated on: Jan 22, 2026 | 3:29 PM

Share

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, 10 ಮಂದಿ ಸೈನಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 9 ಮಂದಿ ಗಾಯಗೊಂಡಿದ್ದಾರೆ. ವಾಹನವು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಭದೇರ್ವಾ-ಚಂಬಾ ಅಂತಾರಾಜ್ಯ ರಸ್ತೆಯ ಖನ್ನಿ ಟಾಪ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಶ್ರೀನಗರ, ಜನವರಿ 22: ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭಾರತೀಯ ಸೇನಾ ವಾಹನವೊಂದು ಕಂದಕಕ್ಕೆ ಉರುಳಿದ್ದು, 10 ಮಂದಿ ಸೈನಿಕರು ಸಾವನ್ನಪ್ಪಿರುವ ಮಾಹಿತಿ ಲಭ್ಯವಾಗಿದೆ. 9 ಮಂದಿ ಗಾಯಗೊಂಡಿದ್ದಾರೆ. ವಾಹನವು ರಸ್ತೆಯಿಂದ ಜಾರಿ ಆಳವಾದ ಕಂದಕಕ್ಕೆ ಉರುಳಿಬಿದ್ದಿದೆ. ಭದೇರ್ವಾ-ಚಂಬಾ ಅಂತಾರಾಜ್ಯ ರಸ್ತೆಯ ಖನ್ನಿ ಟಾಪ್‌ನಲ್ಲಿ ಈ ಅಪಘಾತ ಸಂಭವಿಸಿದೆ.

ಒಟ್ಟು 17 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ವಾಹನವು ಎತ್ತರದ ಪೋಸ್ಟ್ ಕಡೆಗೆ ಹೋಗುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಕಂದಕಕ್ಕೆ ಉರುಳಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ ಮತ್ತು ಪೊಲೀಸರು ಜಂಟಿ ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಆರಂಭಿಸಿದಾಗ ನಾಲ್ವರು ಸೈನಿಕರು ಮೃತಪಟ್ಟಿರುವುದು ಕಂಡುಬಂದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡಿದ್ದ ಇತರ ಒಂಬತ್ತು ಸೈನಿಕರನ್ನು ರಕ್ಷಿಸಲಾಗಿದೆ ಮತ್ತು ಅವರಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ವಿಶೇಷ ಚಿಕಿತ್ಸೆಗಾಗಿ ಉಧಮ್‌ಪುರ ಮಿಲಿಟರಿ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಸಾಗಿಸಲಾಗಿದೆ ಎಂದು ಅವರು ಹೇಳಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ