ಕನ್ವರ್ ಯಾತ್ರೆ: ವೇಗವಾಗಿ ಬಂದ ಆಂಬ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ, ಇಬ್ಬರು ಸಾವು

Updated on: Jul 20, 2025 | 11:10 AM

ಉತ್ತರ ಪ್ರದೇಶದ ಗಾಜಿಯಾಬಾದ್​​ನಲ್ಲಿ ವೇಗವಾಗಿ ಬಂದ ಆಂಬ್ಲ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವಾರ್ಷಿಕ ಕನ್ವರ್ ಯಾತ್ರೆಗಾಗಿ ಗಂಗಾ ನದಿಯಿಂದ ನೀರು ಸಂಗ್ರಹಿಸಲು ಯಾತ್ರಿಕರು ಹರಿದ್ವಾರದ ಕಡೆಗೆ ಹೋಗುತ್ತಿದ್ದಾಗ ಕದ್ರಾಬಾದ್ ಬಳಿಯ ದೆಹಲಿ-ಮೀರತ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 11.45 ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ.

ಗಾಜಿಯಾಬಾದ್, ಜುಲೈ 20: ಉತ್ತರ ಪ್ರದೇಶದ ಗಾಜಿಯಾಬಾದ್​​ನಲ್ಲಿ ವೇಗವಾಗಿ ಬಂದ ಆಂಬ್ಲ್ಯುಲೆನ್ಸ್​ ಕನ್ವಾರಿಯಾಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ. ವಾರ್ಷಿಕ ಕನ್ವರ್ ಯಾತ್ರೆಗಾಗಿ ಗಂಗಾ ನದಿಯಿಂದ ನೀರು ಸಂಗ್ರಹಿಸಲು ಯಾತ್ರಿಕರು ಹರಿದ್ವಾರದ ಕಡೆಗೆ ಹೋಗುತ್ತಿದ್ದಾಗ ಕದ್ರಾಬಾದ್ ಬಳಿಯ ದೆಹಲಿ-ಮೀರತ್ ಹೆದ್ದಾರಿಯಲ್ಲಿ ಈ ಘಟನೆ ಸಂಭವಿಸಿದೆ. ರಾತ್ರಿ 11.45 ರ ಸುಮಾರಿಗೆ ಈ ದುರಂತ ಸಂಭವಿಸಿದ್ದು, ಅತಿ ವೇಗದಲ್ಲಿ ಚಲಿಸುತ್ತಿದ್ದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಬೈಕ್​​ನಲ್ಲಿರುವ ಸವಾರರು ರಸ್ತೆಗೆ ಎಸೆಯಲ್ಪಟ್ಟರು, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇತರೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More