AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ತನಿಖೆ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಎಸ್​​ಪಿ

ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ತನಿಖೆ ಬೆನ್ನಲ್ಲೇ ಶಾಕಿಂಗ್ ಹೇಳಿಕೆ ನೀಡಿದ ಚಿಕ್ಕಬಳ್ಳಾಪುರ ಎಸ್​​ಪಿ

ಅಕ್ಷಯ್​ ಪಲ್ಲಮಜಲು​​
|

Updated on: May 31, 2026 | 10:16 PM

Share

ಬಾಗೇಪಲ್ಲಿ ಸಮೀಪ ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಆರು ಮಂದಿ ಮೃತಪಟ್ಟಿದ್ದಾರೆ. ಗಾರೆ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ 10 ಜನರಿದ್ದ ಆಟೋಗೆ, ಹಿಂಬದಿಯಿಂದ ಅತಿ ವೇಗವಾಗಿ ಬಂದ ಥಾರ್ ಡಿಕ್ಕಿ ಹೊಡೆದಿದೆ. ಆಟೋವು ರಸ್ತೆ ಬದಿಯ ಲಾರಿ ಮತ್ತು ಥಾರ್ ನಡುವೆ ಸಿಲುಕಿ ಸ್ಯಾಂಡ್‌ವಿಚ್ ಆಗಿದೆ. ಹಲವರು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬೆಂಗಳೂರು, ಮೇ.31: ಬಾಗೇಪಲ್ಲಿ ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಟ್ಟು ಆರು ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು-ಹೈದರಾಬಾದ್ ಹೆದ್ದಾರಿಯಲ್ಲಿ ಮಧ್ಯಾಹ್ನ ಸುಮಾರು 3 ಗಂಟೆಗೆ ಈ ದುರ್ಘಟನೆ ನಡೆದಿದೆ. ಗಾರೆ ಕೆಲಸ ಮುಗಿಸಿ ಹಿಂತಿರುಗುತ್ತಿದ್ದ ಹತ್ತು ಜನರನ್ನು (ಒಬ್ಬ ಚಾಲಕ ಮತ್ತು ಒಂಬತ್ತು ಮಹಿಳೆಯರು) ಕರೆದೊಯ್ಯುತ್ತಿದ್ದ ಆಟೋಗೆ, ಅತಿ ವೇಗವಾಗಿ ಬಂದ ಥಾರ್ ವಾಹನವು ಹಿಂಬದಿಯಿಂದ ಡಿಕ್ಕಿ ಹೊಡೆದಿದೆ. ಈ ಪರಿಣಾಮದಿಂದ, ಆಟೋ ವಾಹನವು ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಲಾರಿ ಮತ್ತು ಥಾರ್ ವಾಹನಗಳ ನಡುವೆ ಸಿಲುಕಿ ಸ್ಯಾಂಡ್‌ವಿಚ್‌ನಂತೆ ನಜ್ಜುಗುಜ್ಜಾಗಿದೆ. ಅಪಘಾತ ಸಂಭವಿಸಿದ ಸ್ಥಳದಲ್ಲೇ ಐದು ಮಂದಿ ಮೃತಪಟ್ಟಿದ್ದಾರೆ. ಗಾಯಗೊಂಡ ಉಳಿದ ಐದು ಜನರನ್ನು ಬಾಗೇಪಲ್ಲಿ ಆಸ್ಪತ್ರೆಗೆ ದಾಖಲಿಸಿ, ಪ್ರಥಮ ಚಿಕಿತ್ಸೆ ನೀಡಿ ಚಿಕ್ಕಬಳ್ಳಾಪುರಕ್ಕೆ ಕಳುಹಿಸಲಾಗಿತ್ತು. ಚಿಕ್ಕಬಳ್ಳಾಪುರದಲ್ಲಿ ಮತ್ತೊಬ್ಬ ಮಹಿಳೆ ಸಾವನ್ನಪ್ಪುವುದರೊಂದಿಗೆ, ಒಟ್ಟು ಸಾವಿನ ಸಂಖ್ಯೆ ಆರುಕ್ಕೆ ಏರಿದೆ. ಲಾರಿ ಚಾಲಕ ಮತ್ತು ಥಾರ್ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಘಟನೆಯ ಕುರಿತು ಪೊಲೀಸರು ತನಿಖೆಯನ್ನು ಕೈಗೊಂಡಿದ್ದಾರೆ. ಈ ಘಟನೆ ಬಗ್ಗೆ ಪೊಲೀಸ್​​ ಅಧಿಕಾರಿ ಪ್ರಮುಖ ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಈ ಬಗ್ಗೆ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳನ್ನು ಓದಲಿ ಇಲ್ಲಿ ಕ್ಲಿಕ್ ಮಾಡಿ

Follow Us