Punjab: ಹೋಶಿಯಾರ್ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ದಾಸುಯಾ-ಹಾಜಿಪುರ ರಸ್ತೆಯ ಸಗ್ರಾ ಅಡ್ಡಾ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ 8 ಮಂದಿ ಸಾವನ್ನಪ್ಪಿದ್ದು, 25 ಮಂದಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲಿ ಪಲ್ಟಿಯಾಗಿದೆ. ಸ್ಥಳೀಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ತಕ್ಷಣದ ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ.ಗಾಯಗೊಂಡ ಪ್ರಯಾಣಿಕರನ್ನು ದಾಸುಯಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಕೇರಿಯನ್ ಉಪ ಪೊಲೀಸ್ ವರಿಷ್ಠಾಧಿಕಾರಿ ಕುಲ್ವಿಂದರ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.
ಹೋಶಿಯಾರ್ಪುರ, ಜುಲೈ 07: ಪಂಜಾಬ್ನ ಹೋಶಿಯಾರ್ಪುರ ಜಿಲ್ಲೆಯ ದಾಸುಯಾ-ಹಾಜಿಪುರ ರಸ್ತೆಯ ಸಗ್ರಾ ಬಸ್ ಪಲ್ಟಿಯಾಗಿದ್ದು, 8 ಮಂದಿ ಸಾವನ್ನಪ್ಪಿ, 25 ಮಂದಿ ಗಾಯಗೊಂಡಿದ್ದಾರೆ. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಮಧ್ಯದಲ್ಲಿ ಪಲ್ಟಿಯಾಗಿದೆ. ಸ್ಥಳೀಯ ಅಧಿಕಾರಿಗಳು ಮತ್ತು ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿ ತಕ್ಷಣದ ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಿವೆ. ಗಾಯಗೊಂಡ ಪ್ರಯಾಣಿಕರನ್ನು ದಾಸುಯಾ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮುಕೇರಿಯನ್ ಉಪ ಪೊಲೀಸ್ ವರಿಷ್ಠಾಧಿಕಾರಿ ಕುಲ್ವಿಂದರ್ ಸಿಂಗ್ ವಿರ್ಕ್ ತಿಳಿಸಿದ್ದಾರೆ.ಅಪಘಾತದ ಕಾರಣ ಇನ್ನೂ ತಿಳಿದುಬಂದಿಲ್ಲ ಮತ್ತು ಅದನ್ನು ಸಂಪೂರ್ಣವಾಗಿ ತನಿಖೆ ಮಾಡಲಾಗುತ್ತದೆ ಕುಲ್ವಿಂದರ್ ಸಿಂಗ್ ಹೇಳಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ