ಜನಸ್ನೇಹಿ ಐಎಎಸ್ ಅಧಿಕಾರಿಯನ್ನು ಬಲಿಪಡೆದ ಶ್ವಾನ

Edited By:

Updated on: Nov 25, 2025 | 9:30 PM

ದಕ್ಷ ಐಎಎಸ್ ಅಧಿಕಾರಿ ಮಹಂತೇಶ್ ಬೀಳಗಿ ಅವರು ಕಲಬುರಗಿ ಜಿಲ್ಲೆಯ ಜೇವರ್ಗಿ ಬೈಪಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ನಿಧನರಾಗಿದ್ದಾರೆ. ಸಂಬಂಧಿಕರ ವಿವಾಹ ಕಾರ್ಯಕ್ರಮಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಪ್ರಾಮಾಣಿಕ ಮತ್ತು ಸರಳ ವ್ಯಕ್ತಿತ್ವದ ಅಧಿಕಾರಿಯ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿಯುತ್ತಿದೆ.

ಕಲಬುರಗಿ, ನವೆಂಬರ್ 25: ಕಾರು ಅಪಘಾತದಲ್ಲಿ IAS ಅಧಿಕಾರಿ ಮಹಾಂತೇಶ್ ಬೀಳಗಿ(51) ಸಾವನ್ನಪ್ಪಿದ್ದಾರೆ. ವಿಜಯಪುರದಿಂದ ಕಲಬುರಗಿಗೆ ಕಾರಿನಲ್ಲಿ ಹೊರಟಿದ್ದರು. ಮಾರ್ಗ ಮಧ್ಯೆ ಶ್ವಾನ ಅಡ್ಡಬಂದ ಹಿನ್ನೆಲೆ ಅದನ್ನು ತಪ್ಪಿಸಲು ಹೋಗಿ ಜೇವರ್ಗಿ ಬೈಪಾಸ್‌ನಲ್ಲಿ ಭೀಕರ ಅಪಘಾತ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡಿದ್ದ ಮಹಾಂತೇಶ್‌ ಅವರನ್ನ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.