Train Accident: ಸ್ಪೇನ್ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ, 21 ಮಂದಿ ಸಾವು
ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಸ್ಪೇನ್, ಜನವರಿ 19: ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಂಡಲೂಸಿಯನ್ ನಗರಗಳಾದ ಕಾರ್ಡೋಬಾ, ಸೆವಿಲ್ಲೆ, ಮಲಗಾ ಮತ್ತು ಹುಯೆಲ್ವಾ ನಡುವಿನ ಹೈ-ಸ್ಪೀಡ್ ಸೇವೆಗಳನ್ನು ಕನಿಷ್ಠ ಸೋಮವಾರ ಪೂರ್ತಿ ಸ್ಥಗಿತಗೊಳಿಸಲಾಗುವುದು ಎಂದು ಅಡಿಫ್ ತಿಳಿಸಿದ್ದಾರೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

