Train Accident: ಸ್ಪೇನ್​ನಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ, 21 ಮಂದಿ ಸಾವು

Updated on: Jan 19, 2026 | 8:04 AM

ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಸ್ಪೇನ್, ಜನವರಿ 19: ಆಂಡಲೂಸಿಯಾದ ದಕ್ಷಿಣ ಪ್ರದೇಶದಲ್ಲಿ ಎರಡು ಹೈಸ್ಪೀಡ್ ರೈಲುಗಳ ನಡುವೆ ಡಿಕ್ಕಿ ಸಂಭವಿಸಿ 21 ಜನರು ಸಾವನ್ನಪ್ಪಿ, 70 ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಮಲಗಾದಿಂದ ಮ್ಯಾಡ್ರಿಡ್‌ಗೆ ಪ್ರಯಾಣಿಸುತ್ತಿದ್ದ ರೈಲು ಅಡಾಮುಜ್ ಬಳಿ ಹಳಿತಪ್ಪಿ, ಇನ್ನೊಂದು ಹಳಿ ದಾಟಿ, ಮುಂದೆ ಬರುತ್ತಿದ್ದ ರೈಲಿಗೆ ಡಿಕ್ಕಿ ಹೊಡೆದ ಪರಿಣಾಮ ಆ ರೈಲು ಕೂಡ ಹಳಿತಪ್ಪಿತ್ತು.ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ.30 ಜನರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಾರಿಗೆ ಸಚಿವ ಆಸ್ಕರ್ ಪುಯೆಂಟೆ ಸುದ್ದಿಗಾರರಿಗೆ ತಿಳಿಸಿದ್ದಾರೆ. ಆಂಡಲೂಸಿಯನ್ ನಗರಗಳಾದ ಕಾರ್ಡೋಬಾ, ಸೆವಿಲ್ಲೆ, ಮಲಗಾ ಮತ್ತು ಹುಯೆಲ್ವಾ ನಡುವಿನ ಹೈ-ಸ್ಪೀಡ್ ಸೇವೆಗಳನ್ನು ಕನಿಷ್ಠ ಸೋಮವಾರ ಪೂರ್ತಿ ಸ್ಥಗಿತಗೊಳಿಸಲಾಗುವುದು ಎಂದು ಅಡಿಫ್ ತಿಳಿಸಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Loading...
Unable to load recommendations.
Follow Us
ನಯನಾ ರಾಜೀವ್

ನಯನಾ ರಾಜೀವ್ ಮೂಲತಃ ಶಿವಮೊಗ್ಗ ಜಿಲ್ಲೆಯ ಸಾಗರದ ಬಾಳೆಗೆರೆಯವರು, ಹಿಂದಿಯಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಮಾಧ್ಯಮ ಕ್ಷೇತ್ರದಲ್ಲಿ 10ಕ್ಕೂ ಹೆಚ್ಚು ವರ್ಷ ಕೆಲಸ ಮಾಡಿದ ಅನುಭವವಿದೆ. ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದಾರೆ. ಒನ್​ ಇಂಡಿಯಾ ಕನ್ನಡ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದಾರೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಮೂರು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್ ಮತ್ತು ಸಂಗೀತ.

Read More