ಕಲಬುರಗಿ: ತಾಂತ್ರಿಕ ದೋಷದಿಂದ ತರಬೇತಿ ನಿರತ ವಿಮಾನ ತುರ್ತು ಭೂಸ್ಪರ್ಶವಾಗಿದೆ. ವಿಮಾನ ಟೇಕಾಫ್ ಆದ ನಂತರ ಇಂಜಿನ್‌ನಲ್ಲಿ ತಾಂತ್ರಿಕ ಸಮಸ್ಯೆಯಾಗಿರುವುದರಿಂದ ಕಲಬುರಗಿ ಜಿಲ್ಲೆ ಚಿತ್ತಾಪುರ ತಾಲೂಕಿನ ಪೇಟ್ ಸೀರೂರು ಗ್ರಾಮದ ಬಳಿ ಭೂಸ್ಪರ್ಶವಾಗಿದೆ. ಕಲಬುರಗಿ ವಿಮಾನ ನಿಲ್ದಾಣದಿಂದ ಟೇಕಾಫ್ ಆಗಿ 15 ಕಿ.ಮೀ ಸಂಚರಿಸಿದೆ. ಆದ್ರೆ, ದಿಢೀರ್ ವಿಮಾನದ ಇಂಜಿನ್‌ನಲ್ಲಿ ಟೆಕ್ನಿಕಲ್ ಸಮಸ್ಯೆ ಕಾಣಿಸಿಕೊಂಡಿದೆ. ಇದರಿಂದ ಕೂಡಲೇ ಎಚ್ಚೆತ್ತ ಪೈಲೆಟ್, ಸೀರೂರ್ ಗ್ರಾಮದ ಜಮೀನಿನಲ್ಲಿ ವಿಮಾನವನ್ನು ಲ್ಯಾಂಡ್ ಮಾಡಿದ್ದಾರೆ. ಅದೃಷ್ಟವಶಾತ್ ಯಾವುದೇ ಅನಾಹುತವಾಗಿಲ್ಲ. ವಿಮಾನದಲ್ಲಿದ್ದ ಪೈಲಟ್ ಹಾಗೂ ಟ್ರೈನಿ ಪೈಲೇಟ್ ಸೇಫ್ ಆಗಿದ್ದಾರೆ.