Aircraft Crash:ಕಾನ್ಪುರದಲ್ಲಿ ತರಬೇತಿ ವಿಮಾನ ಪತನ: ಕರ್ನಾಟಕ ಹಾಗೂ ಗುಜರಾತ್ ಮೂಲದ ಇಬ್ಬರು ದುರ್ಮರಣ
ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ನಾಲ್ಕು ಆಸನಗಳ ಲಘು ತರಬೇತಿ ವಿಮಾನವೊಂದು ಪತನಗೊಂಡಿದ್ದು, ವಿಮಾನದಲ್ಲಿದ್ದ ಪೈಲಟ್ ಮತ್ತು ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಪೊಲೀಸ್ ಆಯುಕ್ತ ರಘುಬೀರ್ ಲಾಲ್ ನೀಡಿರುವ ಮಾಹಿತಿ ಪ್ರಕಾರ, ಮುಂಜಾನೆ ಸುಮಾರು 11.50 ರ ವೇಳೆಗೆ ಈ ಭೀಕರ ಅವಘಡ ಸಂಭವಿಸಿದೆ. ಮೃತರನ್ನು ಕರ್ನಾಟಕ ಮತ್ತು ಗುಜರಾತ್ ಮೂಲದವರು ಎಂದು ಪ್ರಾಥಮಿಕವಾಗಿ ಗುರುತಿಸಲಾಗಿದೆ.
ಕಾನ್ಪುರ, ಆಗಸ್ಟ್ 27: ಕಾನ್ಪುರದ ಗಂಗಾ ಬ್ಯಾರೇಜ್ ಸಮೀಪದ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಗುರುವಾರ ಬೆಳಗ್ಗೆ ನಾಲ್ಕು ಆಸನಗಳ ಲಘು ತರಬೇತಿ ವಿಮಾನವೊಂದು ಪತನಗೊಂಡಿದ್ದು, ವಿಮಾನದಲ್ಲಿದ್ದ ಪೈಲಟ್ ಮತ್ತು ತರಬೇತಿ ಪಡೆಯುತ್ತಿದ್ದ ವಿದ್ಯಾರ್ಥಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪೊಲೀಸ್ ಆಯುಕ್ತ ರಘುಬೀರ್ ಲಾಲ್ ನೀಡಿರುವ ಮಾಹಿತಿ ಪ್ರಕಾರ, ಮುಂಜಾನೆ ಸುಮಾರು 11.50 ರ ವೇಳೆಗೆ ಈ ಭೀಕರ ಅವಘಡ ಸಂಭವಿಸಿದೆ. ಮೃತರನ್ನು ಕರ್ನಾಟಕ ಮತ್ತು ಗುಜರಾತ್ ಮೂಲದವರು ಎಂದು ಪ್ರಾಥಮಿಕವಾಗಿ ಗುರುತಿಸಲಾಗಿದೆ.
ಅನುಭವಿ ಪೈಲಟ್: ವಿಮಾನ ಚಲಾಯಿಸುತ್ತಿದ್ದ ಮುಖ್ಯ ಬೋಧಕ ಪೈಲಟ್‌ಗೆ ಸುಮಾರು 3 ಸಾವಿರ ಗಂಟೆಗಳಿಗೂ ಹೆಚ್ಚು ಕಾಲ ವಿಮಾನ ಹಾರಾಟ ನಡೆಸಿದ ಅಪಾರ ಅನುಭವವಿತ್ತು. ಅಪಘಾತದ ಮಾಹಿತಿ ತಿಳಿದ ತಕ್ಷಣವೇ ಸ್ಥಳೀಯ ಪೊಲೀಸರು ಹಾಗೂ ವಿಪತ್ತು ನಿರ್ವಹಣಾ ತಂಡಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಹೊರತೆಗೆದಿದ್ದಾರೆ. ವಿಮಾನ ಪತನಕ್ಕೆ ಎಂಜಿನ್ ವೈಫಲ್ಯವೇ ಅಥವಾ ಹವಾಮಾನ ವೈಪರೀತ್ಯವೇ ಕಾರಣ ಎಂಬ ಬಗ್ಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ (DGCA) ತನಿಖೆ ಆರಂಭಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

