ಬೆಂಗಳೂರು: ಟ್ರಾನ್ಸ್‌ಫಾರ್ಮರ್‌ನಲ್ಲಿ ಹತ್ತಿಕೊಂಡ ಬೆಂಕಿ ತಗುಲಿ ಸುಟ್ಟು ಕರಕಲಾದ ಐಷಾರಾಮಿ ಕಾರುಗಳು

Rakesh Nayak Manchi

Updated on: Aug 04, 2023 | 9:42 PM

ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ಹತ್ತಿಕೊಂಡ ಬೆಂಕಿ ಪಕ್ಕದಲ್ಲೇ ನಿಲ್ಲಿಸಿದ್ದ ಮರ್ಸಿಡಿಸ್ ಬೆಂಜ್ ಸೇರಿದಂತೆ ಎರಡು ಕಾರುಗಳಿಗೆ ತಗುಲಿ ಹೊತ್ತಿ ಉರಿದ ಘಟನೆ ನಗರದ ಬಾಣಸವಾಡಿಯ ಸ್ಪೆನ್ಸರ್ ರಸ್ತೆಯಲ್ಲಿ ನಡೆದಿದೆ

ಬೆಂಗಳೂರು, ಆಗಸ್ಟ್ 4: ಟ್ರಾನ್ಸ್‌ಫಾರ್ಮರ್‌ ಸ್ಫೋಟಗೊಂಡು ಹತ್ತಿಕೊಂಡ ಬೆಂಕಿ ಪಕ್ಕದಲ್ಲೇ ನಿಲ್ಲಿಸಿದ್ದ ಮರ್ಸಿಡಿಸ್ ಬೆಂಜ್ ಸೇರಿದಂತೆ ಎರಡು ಕಾರುಗಳಿಗೆ ತಗುಲಿ ಹೊತ್ತಿ ಉರಿದ ಘಟನೆ ನಗರದ (Bengaluru) ಬಾಣಸವಾಡಿಯ ಸ್ಪೆನ್ಸರ್ ರಸ್ತೆಯಲ್ಲಿ ನಡೆದಿದೆ. ಘಟನೆ ಸಂದರ್ಭದಲ್ಲಿ ಕಾರಿನಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ.

ರಸ್ತೆಯ ಮನೆಯೊಂದರ ಗೇಟಿನ ಬಳಿ ಎರಡು ಕಾರುಗಳಲ್ಲಿ ಒಂದು ಕಾರು ನಿಂತಿತ್ತು. ಟ್ರಾನ್ಸ್‌ಫಾರ್ಮರ್‌ಗೆ ಬೆಂಕಿ ಹೊತ್ತಿಕೊಳ್ಳುವ ಮುನ್ನವೇ ಬೆಂಜ್‌ನ ಚಾಲಕ ಆನ್‌ ರೋಡ್‌ನಲ್ಲಿ ನಿಲ್ಲಿಸಿ ಹತ್ತಿರದ ಮನೆಯಲ್ಲಿದ್ದ ತನ್ನ ಸಂಬಂಧಿಕರನ್ನು ಭೇಟಿಯಾಗಲು ಹೋಗಿದ್ದರು. ಮಹಾರಾಷ್ಟ್ರ ನೋಂದಣಿಯ ವಾಹನದ ಚಾಲಕ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಪುಣೆಯಿಂದ ಬೆಂಗಳೂರಿಗೆ ಬಂದಿದ್ದರು.

ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.