ಈಗಿನಿಂದಲೇ ತಟ್ಟಿದ ಸಾರಿಗೆ ನೌಕರರ ಮುಷ್ಕರ ಬಿಸಿ: ಬಸ್​ ಗಳಿಲ್ಲದೇ ಪ್ರಯಾಣಿಕರು ಕಂಗಾಲು

Updated on: Aug 04, 2025 | 9:40 PM

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೈಕೋರ್ಟ್ ಬೇಡ ಅಂದರೂ ಸಹ ಆದೇಶ ಮೀರಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ, ಹಾಸನದಲ್ಲಿ ಈಗಿನಿಂದಲೇ ಮುಷ್ಕರ ಬಿಸಿ ಪ್ರಯಾಣಿಕರಿಗೆ ತಟ್ಟಿದೆ

ಹಾಸನ, (ಆಗಸ್ಟ್ 04): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೈಕೋರ್ಟ್ ಬೇಡ ಅಂದರೂ ಸಹ ಆದೇಶ ಮೀರಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ, ಹಾಸನದಲ್ಲಿ ಈಗಿನಿಂದಲೇ ಮುಷ್ಕರ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ಹೌದುಹಾಸನ ಬಸ್ ನಿಲ್ದಾಣದಲ್ಲಿ ಬಸ್ ಗಳಿಲ್ಲ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಾಳೆ ಮುಷ್ಕರ ಹಿನ್ನೆಲೆಯಲ್ಲಿ ಮಧ್ಯಾಹ್ನ ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಸಿಬ್ಬಂದಿ ಗೈರಾಗಿದ್ದಾರೆ. ಹೀಗಾಗಿ ಬಸ್ಗಳು ಸಂಚರಿಸದೇ ನಿಂತಲ್ಲೇ ನಿಂತಿವೆ. ಇದರಿಂದ ಬೇರೆ ಬೇರೆ ಊರಿಗೆ ಹೋಗಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ.

Published on: Aug 04, 2025 09:39 PM