ಸಾರಿಗೆ ನೌಕರರ ಮುಷ್ಕರ ಎಫೆಕ್ಟ್: ರಸ್ತೆಗಳಿದ ಖಾಸಗಿ ವಾಹನಗಳು
ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೈಕೋರ್ಟ್ ಬೇಡ ಅಂದರೂ ಸಹ ಆದೇಶ ಮೀರಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ, ಹಾಸನದಲ್ಲಿ ಈಗಿನಿಂದಲೇ ಮುಷ್ಕರ ಬಿಸಿ ಪ್ರಯಾಣಿಕರಿಗೆ ತಟ್ಟಿದೆ.
ಹಾಸನ, (ಆಗಸ್ಟ್ 04): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೈಕೋರ್ಟ್ ಬೇಡ ಅಂದರೂ ಸಹ ಆದೇಶ ಮೀರಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ, ಹಾಸನದಲ್ಲಿ ಈಗಿನಿಂದಲೇ ಮುಷ್ಕರ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ಹೌದು…ಹಾಸನ ಬಸ್ ನಿಲ್ದಾಣದಲ್ಲಿ ಬಸ್ ಗಳಿಲ್ಲ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಾಳೆ ಮುಷ್ಕರ ಹಿನ್ನೆಲೆಯಲ್ಲಿ ಮಧ್ಯಾಹ್ನ ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಸಿಬ್ಬಂದಿ ಗೈರಾಗಿದ್ದಾರೆ. ಹೀಗಾಗಿ ಬಸ್ ಗಳು ಸಂಚರಿಸದೇ ನಿಂತಲ್ಲೇ ನಿಂತಿವೆ. ಇದರಿಂದ ಬೇರೆ ಬೇರೆ ಊರಿಗೆ ಹೋಗಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ. ಇದರಿಂದ ಖಾಸಗಿ ವಾಹನಗಳು ರಸ್ತೆಗಳಿದಿವೆ. ಸರ್ಕಾರಿ ಬಸ್ ಇಲ್ಲದ ಹಿನ್ನೆಲೆ ಖಾಸಗಿ ಬಸ್ಗಳ ಸಂಚಾರ ಶುರುವಾಗಿದ್ದು, ಅರಸೀಕೆರೆ, ಮೈಸೂರು, ಬೆಂಗಳೂರು ಕಡೆಗೆ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ದಿಢೀರ್ ಖಾಸಗಿ ಬಸ್ಗಳ ಸಂಚಾರ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

