ಸಾರಿಗೆ ನೌಕರರ ಮುಷ್ಕರ ಎಫೆಕ್ಟ್​: ರಸ್ತೆಗಳಿದ ಖಾಸಗಿ ವಾಹನಗಳು

Updated on: Aug 04, 2025 | 10:05 PM

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೈಕೋರ್ಟ್ ಬೇಡ ಅಂದರೂ ಸಹ ಆದೇಶ ಮೀರಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ, ಹಾಸನದಲ್ಲಿ ಈಗಿನಿಂದಲೇ ಮುಷ್ಕರ ಬಿಸಿ ಪ್ರಯಾಣಿಕರಿಗೆ ತಟ್ಟಿದೆ.

ಹಾಸನ, (ಆಗಸ್ಟ್ 04): ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಸಾರಿಗೆ ನೌಕರರು ನಾಳೆ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೈಕೋರ್ಟ್ ಬೇಡ ಅಂದರೂ ಸಹ ಆದೇಶ ಮೀರಿ ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಹೀಗಾಗಿ ನಾಳೆ ಬೆಳಗ್ಗೆ 6 ಗಂಟೆಯಿಂದಲೇ ಯಾವುದೇ ಬಸ್ ಸಂಚಾರ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಆದ್ರೆ, ಹಾಸನದಲ್ಲಿ ಈಗಿನಿಂದಲೇ ಮುಷ್ಕರ ಬಿಸಿ ಪ್ರಯಾಣಿಕರಿಗೆ ತಟ್ಟಿದೆ. ಹೌದು…ಹಾಸನ ಬಸ್ ನಿಲ್ದಾಣದಲ್ಲಿ ಬಸ್ ಗಳಿಲ್ಲ ಪ್ರಯಾಣಿಕರು ಪರದಾಡುತ್ತಿದ್ದಾರೆ. ನಾಳೆ ಮುಷ್ಕರ ಹಿನ್ನೆಲೆಯಲ್ಲಿ ಮಧ್ಯಾಹ್ನ ಕರ್ತವ್ಯಕ್ಕೆ ಹಾಜರಾಗಬೇಕಿದ್ದ ಸಿಬ್ಬಂದಿ ಗೈರಾಗಿದ್ದಾರೆ. ಹೀಗಾಗಿ ಬಸ್​ ಗಳು ಸಂಚರಿಸದೇ ನಿಂತಲ್ಲೇ ನಿಂತಿವೆ. ಇದರಿಂದ ಬೇರೆ ಬೇರೆ ಊರಿಗೆ ಹೋಗಬೇಕಿದ್ದ ಪ್ರಯಾಣಿಕರು ಕಂಗಾಲಾಗಿದ್ದಾರೆ.  ಇದರಿಂದ ಖಾಸಗಿ ವಾಹನಗಳು ರಸ್ತೆಗಳಿದಿವೆ. ಸರ್ಕಾರಿ ಬಸ್ ಇಲ್ಲದ ಹಿನ್ನೆಲೆ ಖಾಸಗಿ ಬಸ್​ಗಳ ಸಂಚಾರ ಶುರುವಾಗಿದ್ದು, ಅರಸೀಕೆರೆ, ಮೈಸೂರು, ಬೆಂಗಳೂರು ಕಡೆಗೆ ಖಾಸಗಿ ಬಸ್ ಸಂಚಾರ ಆರಂಭವಾಗಿದೆ. ದಿಢೀರ್​ ಖಾಸಗಿ ಬಸ್​ಗಳ ಸಂಚಾರ ಹಿನ್ನೆಲೆ ಟ್ರಾಫಿಕ್ ಜಾಮ್ ಉಂಟಾಗಿದೆ.

Loading...
Unable to load recommendations.
Follow Us
ರಮೇಶ್ ಬಿ. ಜವಳಗೇರಾ

ಟಿವಿ9 ಕನ್ನಡದಲ್ಲಿ ಹಿರಿಯ ಉಪ ಸಂಪಾದಕ. ಕಳೆದ 07 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು, ರಾಯಚೂರು ಜಿಲ್ಲೆಯ ಸಿಂಧನೂರಿನ ಜವಳಗೇರಾದಲ್ಲಿ. ಗುಲ್ಬರ್ಗಾ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ನನ್ನ ವೃತ್ತಿ ಆರಂಭವಾಗಿದ್ದೇ ಡಿಜಿಟಲ್​ ಮಾಧ್ಯಮದಿಂದ. ಒನ್​ ಇಂಡಿಯಾ ಕನ್ನಡ, ಏಷ್ಯಾನೆಟ್ ಸುವರ್ಣ ನ್ಯೂಸ್.ಕಾಂನಲ್ಲಿ ಕೆಲಸ ಮಾಡಿದ್ದೇನೆ. ಕ್ರೈಂ, ರಾಜಕೀಯ ಹಾಗೂ ಪ್ರಚಲಿತ ಸುದ್ದಿ ಬಗ್ಗೆ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು ನನ್ನ ಹವ್ಯಾಸಗಳು.

Read More