Amit Shah in Karnataka: ಸಚಿವ ಶ್ರೀರಾಮುಲುಗೆ ಸಂಡೂರುನಿಂದ ಸ್ಪರ್ಧಿಸುವ ಆಸೆ, ವರಿಷ್ಠರು ಒಪ್ಪುವರೇ?

ಅರುಣ್​ ಕುಮಾರ್​ ಬೆಳ್ಳಿ

Updated on: Feb 23, 2023 | 2:41 PM

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವರು ತಾವು ಸಂಡೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.

ಬಳ್ಳಾರಿ: ಜಿಲ್ಲೆಯ ಸಂಡೂರಿಗೆ ಆಗಮಿಸಲಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ವಿಜಯ ಸಂಕಲ್ಪ ಯಾತ್ರೆ ಉದ್ಘಾಟನೆ ಕಾರ್ಯಕ್ರಮದ ಉಸ್ತುವಾರಿಯನ್ನು ವಹಿಸಿಕೊಂಡಿರುವ ಸಾರಿಗೆ ಸಚಿವ ಬಿ ಶ್ರೀರಾಮುಲು (B Sriramulu) ಅವರು ಕಾಂಗ್ರೆಸ್ ಭದ್ರಕೋಟೆಯಾಗಿರುವ ಸಂಡೂರನ್ನು (Sandur) ಭೇದಿಸಿ ಬಿಜೆಪಿ ವಿಜಯಪತಾಕೆ ಹಾರಿಸಲಿದೆ ಎಂದರು. ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಚಿವರು ತಾವು ಸಂಡೂರಿನಿಂದ ಸ್ಪರ್ಧಿಸುವ ಇಂಗಿತ ವ್ಯಕ್ತಪಡಿಸಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Loading...
Unable to load recommendations.
Follow Us
ಅರುಣ್​ ಕುಮಾರ್​ ಬೆಳ್ಳಿ

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.