KKR vs SRH: 4,6,6,4.. ಹೆಡ್ ಹಂಟ್ಗೆ ವೈಭವ್ ಹರೋಹರ
KKR vs SRH IPL 2026: ಈಡನ್ ಗಾರ್ಡನ್‌ನಲ್ಲಿ ನಡೆದ IPL 2026ರ ಕೆಕೆಆರ್ vs ಸನ್‌ರೈಸರ್ಸ್ ಪಂದ್ಯದಲ್ಲಿ, ಟಾಸ್ ಸೋತ ಸನ್‌ರೈಸರ್ಸ್ ಹೈದರಾಬಾದ್ ತಂಡದ ಟ್ರಾವಿಸ್ ಹೆಡ್ ಹಾಗೂ ಅಭಿಷೇಕ್ ಶರ್ಮಾ ಸ್ಫೋಟಕ ಆರಂಭ ನೀಡಿದರು. ಟ್ರಾವಿಸ್ ಹೆಡ್ 21 ಎಸೆತಗಳಲ್ಲಿ 46 ರನ್ ಗಳಿಸಿ, 6 ಬೌಂಡರಿ, 3 ಸಿಕ್ಸರ್ ಸಿಡಿಸಿ ತಂಡಕ್ಕೆ ಭರ್ಜರಿ ಅಡಿಪಾಯ ಹಾಕಿದರು. ಮೊದಲ ವಿಕೆಟ್‌ಗೆ 82 ರನ್‌ಗಳ ಜೊತೆಯಾಟದ ಮೂಲಕ ಎಸ್‌ಆರ್‌ಎಚ್ ಬಲಿಷ್ಠ ಸ್ಥಿತಿ ತಲುಪಿತು.
ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ 2026 ರ 6ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಸನ್‌ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಸೋತ ಸನ್‌ರೈಸರ್ಸ್ ಮೊದಲು ಬ್ಯಾಟಿಂಗ್ ಮಾಡುತ್ತಿದ್ದು, ತಂಡದ ಆರಂಭಿಕರಿಬ್ಬರು ಸ್ಫೋಟಕ ಆರಂಭವನ್ನು ಒದಗಿಸಿಕೊಟ್ಟಿದ್ದಾರೆ. ಅದರಲ್ಲೂ ಆರಂಭದಿಂದಲೂ ಅಬ್ಬರಿಸಿದ ಟ್ರಾವಿಸ್ ಹೆಡ್ ಕೆಕೆಆರ್ ಬೌಲರ್ಗಳನ್ನು ಕಾಡಿದರು.
ಅಭಿಷೇಕ್ ಶರ್ಮಾ ಜೊತೆ ಇನ್ನಿಂಗ್ಸ್ ಆರಂಭಿಸಿದ ಟ್ರಾವಿಸ್ ಹೆಡ್, ವೈಭವ್ ಅರೋರಾ ಬೌಲ್ ಮಾಡಿದ ಇನ್ನಿಂಗ್ಸ್ನ ಮೂರನೇ ಓವರ್ನಲ್ಲಿ 2 ಬೌಂಡರಿ ಹಾಗೂ 2 ಸಿಕ್ಸರ್ಗಳನ್ನು ಬಾರಿಸಿದರು. ಈ ಓವರ್ನ ಮೊದಲ ಎಸೆತವನ್ನು ಬೌಂಡರಿಗಟ್ಟಿದ ಹೆಡ್, ಮೂರು ಮತ್ತು ನಾಲ್ಕನೇ ಎಸೆತದಲ್ಲಿ ಸಿಕ್ಸರ್ ಬಾರಿಸಿದರು. ಐದನೇ ಎಸೆತದಲ್ಲಿ ಮತ್ತೊಂದು ಬೌಂಡರಿ ಬಂತು. ಒಟ್ಟಾರೆ ಈ ಓವರ್ನಲ್ಲಿ 21 ರನ್ಗಳು ಬಂದವು.
ಆದಾಗ್ಯೂ ಈ ಪಂದ್ಯದಲ್ಲಿ ಅರ್ಧಶತಕದಂಚಿನಲ್ಲಿ ಎಡವಿದ ಹೆಡ್ ಕಾರ್ತಿಕ್ ತ್ಯಾಗಿ ಬೌಲ್ ಮಾಡಿದ 6ನೇ ಓವರ್ನ 4ನೇ ಎಸೆತದಲ್ಲಿ ಕ್ಯಾಚಿತ್ತು ಔಟಾದರು. ತಮ್ಮ ಇನ್ನಿಂಗ್ಸ್ನಲ್ಲಿ 21 ಎಸೆತಗಳನ್ನು ಎದುರಿಸಿದ ಹೆಡ್ 6 ಬೌಂಡರಿ ಹಾಗೂ 3 ಸಿಕ್ಸರ್ ಸಹಿತ 46 ರನ್ ಬಾರಿಸಿ ಔಟಾದರು. ಇದರ ಜೊತೆಗೆ ಹೆಡ್, ಅಭಿಷೇಕ್ ಶರ್ಮಾ ಅವರೊಂದಿಗೆ ಮೊದಲ ವಿಕೆಟ್‌ಗೆ 5.4 ಓವರ್ಗಳಲ್ಲಿ 82 ರನ್‌ಗಳ ಜೊತೆಯಾಟ ಕಟ್ಟಿ ತಂಡವನ್ನು ಬಲಿಷ್ಠ ಸ್ಥಿತಿಗೆ ಕೊಂಡೊಯ್ದರು.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ